Union Budget 2026 | ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್ ದರ ಇಳಿಕೆ ಪ್ರಸ್ತಾಪ : ಸಚಿವೆ ನಿರ್ಮಲಾ ಸೀತಾರಾಮನ್

ನಿರ್ಮಲಾ ಸೀತಾರಾಮನ್ (PTI)
ಹೊಸದಿಲ್ಲಿ: ಶಿಕ್ಷಣ ಮತ್ತು ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್ ದರವನ್ನು ಶೇಕಡ 5 ರಿಂದ ಶೇಕಡ 2ಕ್ಕೆ ಇಳಿಸುವ ಪ್ರಸ್ತಾಪವನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಮಂಡಿಸಿದ್ದಾರೆ.
ಇದು ವಿದೇಶದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಮತ್ತು ವಿದೇಶದಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುವವರಿಗೆ ಪ್ರಯೋಜನವನ್ನು ನೀಡುವ ನಿರೀಕ್ಷೆಯಿದೆ.
ದೇಶದ ನೇರ ತೆರಿಗೆ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆ ಸೂಚಿಸುವ ಹೊಸ ಆದಾಯ ತೆರಿಗೆ ಕಾಯ್ದೆ ಏಪ್ರಿಲ್ 1, 2026ರಿಂದ ಜಾರಿಗೆ ಬರಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು.
Next Story





