Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏರ್‌ಟೆಲ್, ಜಿಯೊ ಮತ್ತು ವೊಡಾಫೋನ್...

ಏರ್‌ಟೆಲ್, ಜಿಯೊ ಮತ್ತು ವೊಡಾಫೋನ್ ಮೊಬೈಲ್ ಶುಲ್ಕಗಳ ಹೆಚ್ಚಳ ಕುರಿತು ಸ್ಪಷ್ಟನೆ ನೀಡಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ7 July 2024 3:33 PM IST
share
ಏರ್‌ಟೆಲ್, ಜಿಯೊ ಮತ್ತು ವೊಡಾಫೋನ್ ಮೊಬೈಲ್ ಶುಲ್ಕಗಳ ಹೆಚ್ಚಳ ಕುರಿತು ಸ್ಪಷ್ಟನೆ ನೀಡಿದ ಸರಕಾರ

ಹೊಸದಿಲ್ಲಿ: ಯಾವುದೇ ನಿಯಂತ್ರಣವಿಲ್ಲದೆ ರಿಲಯನ್ಸ್ ಜಿಯೊ, ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ಕಂಪನಿಗಳು ಏಕಪಕ್ಷೀಯವಾಗಿ ದರಗಳನ್ನು ಹೆಚ್ಚಿಸಲು ತಾನು ಅನುಮತಿ ನೀಡಿದ್ದೇನೆ ಎಂಬ ತಪ್ಪುದಾರಿಗೆಳೆಯುವ ಹೇಳಿಕೆಗಳನ್ನು ಸರಕಾರವು ತಿರಸ್ಕರಿಸಿದೆ. ಈ ಟೆಲಿಕಾಂ ಕಂಪನಿಗಳು ತಮ್ಮ ಪ್ರಿಪೇಡ್ ಮತ್ತು ಪೋಸ್ಟ್‌ಪೇಡ್ ಯೋಜನೆಗಳ ದರಗಳನ್ನು ಹೆಚ್ಚಿಸಿದ್ದು, ಇದು 2023, ಜು.3ರಿಂದಲೇ ಜಾರಿಗೊಂಡಿದೆ.

ಖಾಸಗಿ ವಲಯದ ಮೂರು ಮತ್ತು ಸಾರ್ವಜನಿಕ ವಲಯದ ಒಂದು ಕಂಪನಿಗಳೊಂದಿಗೆ ಪ್ರಸ್ತುತ ಮೊಬೈಲ್ ಸೇವೆಗಳ ಮಾರುಕಟ್ಟೆಯು ಬೇಡಿಕೆ ಮತ್ತು ಪೂರೈಕೆಗೆ ಅನುಗುಣವಾಗಿ ಕಾರ್ಯಾಚರಿಸುತ್ತಿದೆ. ದೂರಸಂಪರ್ಕ ಸೇವೆಗಳ ದರಗಳು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್)ವು ಅಧಿಸೂಚಿಸಿರುವ ನಿಯಂತ್ರಕ ಚೌಕಟ್ಟಿನೊಳಗೆ ಮಾರುಕಟ್ಟೆಗೆ ಅನುಗುಣವಾಗಿ ನಿರ್ಧರಿಸಲ್ಪಡುತ್ತವೆ ಎಂದು ಟ್ರಾಯ್ ಅಧಿಕೃತ ಹೇಳಿಕೆಯಲ್ಲಿ ಸ್ವಷ್ಟಪಡಿಸಿದೆ.

ನಿಯಂತ್ರಣ ಅಧಿಕಾರವು ಟ್ರಾಯ್ ಅಧೀನದಲ್ಲಿರುವುದರಿಂದ ಮುಕ್ತ ಮಾರುಕಟ್ಟೆ ನಿರ್ಧಾರಗಳಲ್ಲಿ ಸರಕಾರವು ಮಧ್ಯ ಪ್ರವೇಶಿಸುವುದಿಲ್ಲ. ಮೊಬೈಲ್ ಸೇವೆಗಳ ದರಗಳಲ್ಲಿ ಯಾವುದೇ ಬದಲಾವಣೆಯನ್ನು ದೂರಸಂಪರ್ಕ ಕಂಪನಿಗಳು ಟ್ರಾಯ್‌ಗೆ ತಿಳಿಸುತ್ತವೆ ಮತ್ತು ಇಂತಹ ಬದಲಾವಣೆಗಳು ನಿಗದಿತ ನಿಯಂತ್ರಕ ಚೌಕಟ್ಟಿನೊಳಗೆ ಇವೆಯೇ ಎನ್ನುವ ಬಗ್ಗೆ ಟ್ರಾಯ್ ಮೇಲ್ವಿಚಾರಣೆ ನಡೆಸುತ್ತದೆ ಎಂದೂ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಟೆಲಿಕಾಂ ಕಂಪನಿಗಳು ಎರಡು ವರ್ಷಕ್ಕೂ ಅಧಿಕ ಸಮಯದ ಬಳಿಕ ಮೊಬೈಲ್ ಸೇವೆಗಳ ದರವನ್ನು ಹೆಚ್ಚಿಸಿವೆ ಎಂದು ಎತ್ತಿ ತೋರಿಸಿರುವ ಅಧಿಕೃತ ಹೇಳಿಕೆಯು,ಕಳೆದ ಎರಡು ವರ್ಷಗಳಲ್ಲಿ ಕೆಲವು ಟೆಲಿಕಾಂ ಕಂಪನಿಗಳು ದೇಶಾದ್ಯಂತ 5ಜಿ ಸೇವೆಗಳನ್ನು ಆರಂಭಿಸಲು ಭಾರೀ ಹೂಡಿಕೆಯನ್ನು ಮಾಡಿವೆ. ಪರಿಣಾಮವಾಗಿ ಸರಾಸರಿ ಮೊಬೈಲ್ ವೇಗವು 100 ಎಂಬಿಪಿಸ್ ಮಟ್ಟಕ್ಕೆ ಗಣನೀಯವಾಗಿ ಹೆಚ್ಚಿದೆ ಮತ್ತು ಭಾರತದ ಅಂತರರಾಷ್ಟ್ರೀಯ ರ್ಯಾಂಕ್ 2022 ಅಕ್ಟೋಬರ್‌ನಲ್ಲಿ ಇದ್ದ 111ರಿಂದ ಇಂದು 15ಕ್ಕೆ ಜಿಗಿದಿದೆ. ಚಂದಾದಾರರ ಹಿತಾಸಕ್ತಿಗಳನ್ನು ರಕ್ಷಿಸುವಾಗ 5ಜಿ,6ಜಿ,ಐಒಟಿ/ಎಂ2ಎಂ ಇತ್ಯಾದಿಗಳಂತಹ ಇತ್ತೀಚಿನ ತಂತ್ರಜ್ಞಾನದಲ್ಲಿ ಹೂಡಿಕೆಗಳು ಸೇರಿದಂತೆ ದೂರಸಂಪರ್ಕ ಕ್ಷೇತ್ರದ ಕ್ರಮಬದ್ಧ ಬೆಳವಣಿಗೆಗಾಗಿ ಅದರ ಆರ್ಥಿಕ ಕಾರ್ಯಸಾಧ್ಯತೆಯೂ ಮುಖ್ಯವಾಗಿದೆ ಎಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X