ಇಂಡಿಗೊ ಅವ್ಯವಸ್ಥೆ: ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡುವಂತೆ ಕೇಂದ್ರ ಸರಕಾರ ಗಡುವು

Photo credit: PTI
ಹೊಸದಿಲ್ಲಿ: ಇಂಡಿಗೊ ವಿಮಾನಯಾನ ಸೇವೆಗಳಲ್ಲಿ ಅವ್ಯವಸ್ಥೆ ಮುಂದುವರಿದಿದೆ. ಈ ಮಧ್ಯೆ ವಿಮಾನ ರದ್ದತಿ ಮತ್ತು ಅಡಚಣೆಗಳಿಂದಾಗಿ ಬಾಕಿ ಇರುವ ಎಲ್ಲಾ ಪ್ರಯಾಣಿಕರಿಗೆ ಮರುಪಾವತಿಯನ್ನು ನೀಡುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಇಂಡಿಗೊ ವಿಮಾನಯಾನ ಸಂಸ್ಥೆಗೆ ಗಡುವು ವಿಧಿಸಿದೆ.
ನಾಳೆ(ಡಿ.7) ರಾತ್ರಿ 8 ಗಂಟೆಯೊಳಗೆ ಎಲ್ಲಾ ಪ್ರಯಾಣಿಕರಿಗೆ ಮರುಪಾವತಿಯನ್ನು ಪೂರ್ಣಗೊಳಿಸುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶುಕ್ರವಾರ ಇಂಡಿಗೊ ಸಂಸ್ಥೆಗೆ ನಿರ್ದೇಶನ ನೀಡಿದೆ.
ಕಳೆದ ಒಂದು ವಾರದಿಂದ ಸಾವಿರಾರು ಪ್ರಯಾಣಿಕರು ವಿಮಾನ ರದ್ದತಿ, ತಡೆ ಮತ್ತು ಇತರ ಸಮಸ್ಯೆಗಳಿಂದ ತೊಂದರೆಗೊಳಗಾಗಿದ್ದಾರೆ. ಅವರಿಗೆ ಹಣ ಮರುಪಾವತಿ, ಮರು ಕಾಯ್ದಿರಿಸುವಿಕೆ ಕೋರಿದ ನಂತರ ಈ ನಿರ್ದೇಶನವನ್ನು ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
Next Story





