ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾರಿಗೆ ಅಶೋಕ ಚಕ್ರ ಪ್ರಶಸ್ತಿ ಪ್ರದಾನ

Photo| DD National
ಹೊಸದಿಲ್ಲಿ,ಜ. 26: ಭೂಮಿಯ ವಾತಾವರಣದ ಮಿತಿಯನ್ನು ಮೀರಿದ ಅಸಾಧಾರಣ ಧೈರ್ಯಕ್ಕೆ ಮನ್ನಣೆಯಾಗಿ, ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ ಗಣರಾಜ್ಯೋತ್ಸವದಂದು ರಾಷ್ಟ್ರಪತಿ ದ್ರೌಪದಿ ಮುರ್ಮು ದೇಶದ ಅತ್ಯುನ್ನತ ಶೌರ್ಯ ಪ್ರಶಸ್ತಿಯಾದ ಅಶೋಕ ಚಕ್ರವನ್ನು ಪ್ರದಾನ ಮಾಡಿದರು.
ಭಾರತದ ವಿಸ್ತರಿಸುತ್ತಿರುವ ಮಾನವ ಸಹಿತ ಬಾಹ್ಯಾಕಾಶ ಹಾರಾಟದ ಮಹತ್ವಾಕಾಂಕ್ಷೆಗಳಿಗೆ ಸಂಬಂಧಿಸಿದಂತೆ, ಬಾಹ್ಯಾಕಾಶ ನಿಲ್ದಾಣದಲ್ಲಿನ ಅತ್ಯಂತ ಅಪಾಯಕಾರಿ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿ ಯಶಸ್ಸು ಸಾಧಿಸಿದ ಹಿನ್ನೆಲೆಯಲ್ಲಿ ಈ ಗೌರವ ನೀಡಲಾಗಿದೆ.
ತೀವ್ರ ಹಾಗೂ ಅಪಾಯದ ಪರಿಸ್ಥಿತಿಗಳಲ್ಲಿಯೂ ಕಾರ್ಯಾಚರಣೆಯನ್ನು ನಿರ್ವಹಿಸಿದ ಶುಕ್ಲಾ ಅವರ ಅಸಾಧಾರಣ ಧೈರ್ಯ, ವೃತ್ತಿಪರ ನೈಪುಣ್ಯ ಮತ್ತು ಕಾರ್ಯನಿಷ್ಠೆಯನ್ನು ಈ ಸಂದರ್ಭದಲ್ಲಿ ವಿಶೇಷವಾಗಿ ಪ್ರಶಂಸಿಸಲಾಗಿದೆ.
Next Story





