ಶಾಹಿ ಈದ್ಗಾ ಮಸೀದಿಯನ್ನು ʼವಿವಾದಿತ ರಚನೆʼ ಎಂದು ಘೋಷಿಸುವಂತೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್

ಶಾಹಿ ಈದ್ಗಾ ಮಸೀದಿ (Photo: PTI)
ಮಥುರಾ : ಶಾಹಿ ಈದ್ಗಾ ಮಸೀದಿಯನ್ನು ವಿವಾದಿತ ರಚನೆ ಎಂದು ಘೋಷಿಸುವಂತೆ ಕೋರಿ ಹಿಂದೂಪರರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ವಜಾಗೊಳಿಸಿದೆ. ಮಥುರಾದ ಶಾಹಿ ಈದ್ಗಾ ಮಸೀದಿ ಮತ್ತು ಶ್ರೀ ಕೃಷ್ಣ ಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿ ಇದು ಮಹತ್ವದ ಬೆಳವಣಿಗೆಯಾಗಿದೆ.
ಹಿಂದೂ ಕಕ್ಷಿದಾದರರ ಪರ ವಕೀಲ ಮಹೇಂದ್ರ ಪ್ರತಾಪ್ ಸಿಂಗ್ ಸಲ್ಲಿಸಿದ ಅರ್ಜಿಯಲ್ಲಿ ನ್ಯಾಯಾಲಯದ ದಾಖಲೆಗಳು ಮತ್ತು ಮುಂದಿನ ವಿಚಾರಣೆಗಳಲ್ಲಿ ಶಾಹಿ ಈದ್ಗಾ ಮಸೀದಿಯನ್ನು "ವಿವಾದಿತ ರಚನೆ" ಎಂದು ಅಧಿಕೃತವಾಗಿ ಗೊತ್ತುಪಡಿಸುವಂತೆ ಕೋರಲಾಗಿತ್ತು. ಇದಕ್ಕೆ ಮುಸ್ಲಿಂ ಪರ ಹಾಜರಾಗಿದ್ದ ವಕೀಲರು ಆಕ್ಷೇಪಣೆಯನ್ನು ಸಲ್ಲಿಸಿದ್ದರು.
ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ನ್ಯಾಯಮೂರ್ತಿ ರಾಮ್ ಮನೋಹರ್ ನಾರಾಯಣ್ ಮಿಶ್ರಾ ಅವರ ಏಕಸದಸ್ಯ ಪೀಠವು ಅರ್ಜಿಯನ್ನು ತಿರಸ್ಕರಿಸಿದೆ.
Next Story





