Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಗೀತ ಶಿಕ್ಷಕನ ಬಟ್ಟೆ ಕಳಚಿ...

ಸಂಗೀತ ಶಿಕ್ಷಕನ ಬಟ್ಟೆ ಕಳಚಿ ಲಾಕಪ್‍ನಲ್ಲಿ ಹಿಂಸೆ: ಪೊಲೀಸರಿಗೆ ಹೈಕೋರ್ಟ್ ಛೀಮಾರಿ

ವಾರ್ತಾಭಾರತಿವಾರ್ತಾಭಾರತಿ2 Aug 2023 8:11 AM IST
share
ಸಂಗೀತ ಶಿಕ್ಷಕನ ಬಟ್ಟೆ ಕಳಚಿ ಲಾಕಪ್‍ನಲ್ಲಿ ಹಿಂಸೆ: ಪೊಲೀಸರಿಗೆ ಹೈಕೋರ್ಟ್ ಛೀಮಾರಿ

ಮುಂಬೈ: ಜಾಮೀನು ನೀಡಬಹುದಾದ ಪ್ರಕರಣವೊಂದರಲ್ಲಿ ಸಂಗೀತ ಶಿಕ್ಷಕರೊಬ್ಬರನ್ನು ಅಕ್ರಮವಾಗಿ ಬಂಧಿಸಿ ಲಾಕಪ್‍ನಲ್ಲಿ ಬಟ್ಟೆ ಬಿಚ್ಚಿ ಚಿತ್ರಹಿಂಸೆ ನೀಡಿದ ಮುಂಬೈ ಪೊಲೀಸರ ಕ್ರಮಕ್ಕೆ ಬಾಂಬೆ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

"ವ್ಯಕ್ತಿಯ ಘನತೆ- ಗೌರವ ಪ್ರಮುಖವಲ್ಲವೇ?" ಎಂದು ಪ್ರಶ್ನಿಸಿದ ವಿಭಾಗೀಯ ಪೀಠ, ಟರ್ಡಿಯೊ ಪೊಲೀಸ್ ಠಾಣೆಯ ಮತ್ತು ಸಾತ್ ರಸ್ತಾ ಲಾಕಪ್‍ನ ಎಲ್ಲ ಸಿಸಿಟಿವಿ ದೃಶ್ಯಾವಳಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಡಿಸಿಪಿ ಅಕ್ಬರ್ ಪಠಾಣ್ ಅವರಿಗೆ ಆದೇಶ ನೀಡಿದೆ. ಸಂಗೀತ ಶಿಕ್ಷಕನ ಪತ್ನಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿ, ಅಕ್ರಮ ಬಂಧನದಿಂದ ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿದ್ದರು.

ಸಂಗೀತ ಶಿಕ್ಷಕ ಅಶ್ಲೀಲ ವಿಡಿಯೊಗಳನ್ನು ಪ್ರದರ್ಶಿಸಿದ್ದರು ಎಂದು ಆಪಾದಿಸಿ ಜೂನ್ ತಿಂಗಳಲ್ಲಿ ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಮಲಡ್ ಠಾಣೆಯಲ್ಲಿ ಶಿಕ್ಷಕನ ವಿರುದ್ಧ ಭಾರತೀಯ ದಂಡಸಂಹಿತೆ ಸೆಕ್ಷನ್ 354ಎ ಮತ್ತು 509ರ ಅನ್ವಯ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪ್ರಕರಣವನ್ನು ತರ್‍ದಿಯೊ ಠಾಣೆಗೆ ವರ್ಗಾಯಿಸಲಾಗಿತ್ತು. ಈ ಸಂಬಂಧ ಶಿಕ್ಷಕ ಹಲವು ಬಾರಿ ಠಾಣೆಗೆ ಭೇಟಿ ನೀಡಿದ್ದರು ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಜೂನ್ 17ರಂದು ಶಿಕ್ಷಕನನ್ನು ಬಂಧಿಲಾಗುತ್ತದೆ ಎಂಬ ಮಾಹಿತಿ ಮೇರೆಗೆ ವಕೀಲರು ಜಾಮೀನು ನೀಡಲು ಮುಂದಾಗಿದ್ದರು. ಆದರೂ ಬಂಧಿಸಲಾಗಿತ್ತು. ಮರುದಿನ ವಕೀಲರು ಹೈಕೋರ್ಟ್‍ಗೆ ಮನವಿ ಸಲ್ಲಿಸಿ, 20 ವರ್ಷಗಳಿಂದ ಸಂಗೀತ ಶಿಕ್ಷಕರು ಕಲಾವಿದ ಹಾಗೂ ವಿದ್ಯಾರ್ಥಿ ವರ್ಗದಲ್ಲಿ ಗೌರವ ಹೊಂದಿದ್ದಾರೆ ಎಂದು ವಾದಿಸಿದ್ದರು. ಆರೋಪಿ ಶಿಕ್ಷಕನನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು.

ಸರ್ಕಾರಿ ಅಭಿಯೋಜಕ ಪ್ರಜಕ್ತಾ ಶಿಂಧೆ ಅಫಿಡವಿಟ್ ಸಲ್ಲಿಸಿ, ಹಿರಿಯ ಇನ್‍ಸ್ಪೆಕ್ಟರ್ ವಿವೇಕ್ ಶಿಂಧೆ ಬೇಷರತ್ ಕ್ಷಮೆ ಯಾಚಿಸಿದ್ದಾಗಿ ಹೇಳಿದ್ದರು. ಪಿಎಸ್‍ಐ ಪ್ರಿಯಾಂಕಾ ಕದಂ, ಪ್ರೊಬೆಷನರಿ ಅಧಿಕಾರಿಯಾಗಿದ್ದು, ಪ್ರಮಾದವಶಾತ್ ಬಂಧಿಸಿದ್ದಾರೆ ಎಂದು ಸಮರ್ಥಿಸಿಕೊಂಡಿದ್ದರು. ಇದನ್ನು ನ್ಯಾಯಮೂರ್ತಿಗಳು ತೀವ್ರವಾಗಿ ಆಕ್ಷೇಪಿಸಿದರು. ಬಟ್ಟೆ ಹಾಗೂ ಜನಿವಾರವನ್ನು ಕಿತ್ತು ಚಿತ್ರಹಿಂಸೆ ನೀಡಿದ್ದಾಗಿ ಸಂಗೀತ ಶಿಕ್ಷಕ ಆಪಾದಿಸಿದ್ದರು.

Tags

Mumbai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X