ದಿಲ್ಲಿಯಲ್ಲಿ ಭಾರಿ ಮಳೆ: ನದಿಯಂತಾದ ರಸ್ತೆಗಳು, 90ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬ

Photo credit: PTI
ಹೊಸದಿಲ್ಲಿ: ದಿಲ್ಲಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶನಿವಾರ ಬೆಳಗ್ಗೆಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಇದರಿಂದಾಗಿ ಹಲವಾರು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
ಭಾರಿ ಮಳೆಯಿಂದಾಗಿ ದಿಲ್ಲಿಯ ಪಂಚಕುಯಿಯಾನ್ ಮಾರ್ಗ, ಮಥುರಾ ರಸ್ತೆ ಹಾಗೂ ಭಾರತ್ ಮಂಟಪದ ಹೊರವಲಯದ ರಸ್ತೆ ಸೇರಿದಂತೆ ವಿವಿಧ ಪ್ರದೇಶಗಳು ಜಲಾವೃತಗೊಂಡಿದ್ದು, ವಾಹನ ಸವಾರರು ತಮ್ಮ ವಾಹನ ಚಲಾಯಿಸಲು ಹರಸಾಹಸ ಪಡುವಂತಾಗಿದೆ.
ಭಾರಿ ಮಳೆಯಿಂದಾಗಿ ಸುಮಾರು 90 ವಿಮಾನಗಳ ಹಾರಾಟ ವಿಳಂಬಗೊಂಡಿವೆ ಹಾಗೂ ನಾಲ್ಕು ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ನಾಗರಿಕ ವಿಮಾನ ಯಾನ ಪ್ರಧಾನ ನಿರ್ದೇಶನಾಲಯ ಮಾಹಿತಿ ನೀಡಿದೆ. ಭಾರಿ ಮಳೆಯಿಂದುಂಟಾಗಿರುವ ಪ್ರತಿಕೂಲ ಹವಾಮಾನದಿಂದಾಗಿ, ಕೆಲವು ವಿಮಾನಗಳು ವಿಮಾನ ನಿಲ್ದಾಣದಲ್ಲಿ ಇಳಿಯಲಾಗದೆ, ಕೆಲ ಕಾಲ ಆಗಸದಲ್ಲೇ ಹಾರಾಟ ನಡೆಸುವಂತಾಯಿತು ಎಂದು ವರದಿಯಾಗಿದೆ.
Next Story





