ಕೇರಳ ಮಳೆ: 9 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’

Credit: PTI file photo
ತಿರುವನಂತಪುರ, ಜು. 20: ಕೇರಳದ ಹಲವು ಭಾಗಗಳಲ್ಲಿ ರವಿವಾರ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ನದಿ ಹಾಗೂ ಅಣೆಕಟ್ಟುಗಳಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 9 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕಾಸರಗೋಡು, ಎರ್ನಾಕುಳಂ, ಇಡುಕ್ಕಿ, ತ್ರಿಶೂರು, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್ ಹಾಗೂ ಕಣ್ಣೂರು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಆರಂಜ್ ಅಲರ್ಟ್ ಘೋಷಿಸಿದೆ.
ಕೇರಳದ ಉಳಿದ ಐದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ ಒಂದು ಅಥವಾ ಎರಡು ಪ್ರದೇಶಗಳಲ್ಲಿ ಬಲವಾದ ಗಾಳಿ, ಕೆಲವೊಮ್ಮೆ ಗಂಟೆಗೆ 40 ಕಿ.ಮೀ. ವೇಗದೊಂದಿಗೆ ಸಾಧಾರಣ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Next Story





