ಹೈದರಾಬಾದ್ | ಶೋರೂಮ್ ನಲ್ಲಿ ಬೆಂಕಿ ಅವಘಢ: ಹೊಸ ಕಾರುಗಳು ಸುಟ್ಟು ಕರಕಲು

ಸಾಂದರ್ಭಿಕ ಚಿತ್ರ | PC : PTI
ಹೈದರಾಬಾದ್: ಕಾರು ಶೋರೂಂ ಒಂದರಲ್ಲಿ ಬೆಂಕಿ ಅವಘಡ ಸಂಭವಿಸಿ, ಹೊಸ ಕಾರುಗಳು ಸುಟ್ಟು ಕರಕಲಾಗಿರುವ ಘಟನೆ ಹೈದರಾಬಾದ್ ನ ಕೊತ್ತಗುಡ ಜಂಕ್ಷನ್ ನಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಗುರುವಾರ ತಡರಾತ್ರಿ ಶೋರೂಂನಲ್ಲಿ ಕಾಣಿಸಿಕೊಂಡಿರುವ ಬೆಂಕಿ, ಇಡೀ ಕಟ್ಟಡವನ್ನು ಆವರಿಸಿದೆಯಲ್ಲದೆ, ಹತ್ತಿರದ ಅಂಗಡಿಗಳಿಗೂ ವ್ಯಾಪಿಸಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೆ ಘಟನಾ ಸ್ಥಳಕ್ಕೆ ಧಾವಿಸಿರುವ ಅಗ್ನಿ ಶಾಮಕ ವಾಹನಗಳು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಶೋರೂಂ ಆಸುಪಾಸು ಕಟ್ಟಡಗಳಲ್ಲಿ ವಾಸಿಸುತ್ತಿರುವ ಜನರನ್ನು ಅಲ್ಲಿಂದ ತೆರವುಗೊಳಿಸಲಾಗಿದೆ. ಈ ಬೆಂಕಿ ಅವಘಢದಲ್ಲಿ ಶೋರೂಂನಲ್ಲಿದ್ದ ಕೆಲವು ಕಾರುಗಳು ಸುಟ್ಟು ಕರಕಲಾಗಿವೆ. ಘಟನೆ ಸಂಭವಿಸುತ್ತಿದ್ದಂತೆಯೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರಿಂದ, ಹೆಚ್ಚಿನ ಅನಾಹುತ ತಪ್ಪಿದೆ.
ಬೆಳಗಿನ ಹೊತ್ತು ಈ ಭಾಗದಲ್ಲಿ ಜನಸಂಚಾರ ಹೆಚ್ಚಿದ್ದು, ತಡರಾತ್ರಿ ಈ ಘಟನೆ ನಡೆದಿರುವುದರಿಂದ ಹೆಚ್ಚಿನ ಅಪಾಯ ತಪ್ಪಿದೆ ಎನ್ನಲಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿಗಳ ನಿರಂತರ ಕಾರ್ಯಾಚರಣೆಯಿಂದಾಗಿ ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.





