ಏಕರೂಪ ನಾಗರಿಕ ಸಂಹಿತೆ ಜಾರಿ ಕೇಂದ್ರ ಸರ್ಕಾರದ ಕಾರ್ಯಸೂಚಿಯ ಭಾಗ: ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್

ಅರ್ಜುನ್ ರಾಮ್ ಮೇಘವಾಲ್ | PTI
ಹೊಸದಿಲ್ಲಿ: ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವುದು ನೂತನ ಕೇಂದ್ರ ಸರ್ಕಾರದ ಕಾರ್ಯಸೂಚಿಯ ಭಾಗವಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮೇ ತಿಂಗಳಲ್ಲಿ ಹೇಳಿದ್ದರು.
ಆದಾಗ್ಯೂ, ಎನ್ಡಿಎ ಮಿತ್ರಕೂಟದ ಭಾಗವಾಗಿರುವ ಜೆಡಿಯು ಪಕ್ಷದ ರಾಷ್ಟ್ರೀಯ ವಕ್ತಾರ ಕೆಸಿ ತ್ಯಾಗಿ ಅವರು, ಏಕರೂಪ ನಾಗರಿಕ ಸಂಹಿತೆಯ ಕರಡು ಸಿದ್ಧಪಡಿಸುವ ಸಮಾಲೋಚನೆಯಲ್ಲಿ ಎಲ್ಲಾ ಪಾಲುದಾರರು, ಮುಖ್ಯಮಂತ್ರಿಗಳು, ರಾಜಕೀಯ ಪಕ್ಷಗಳು ಮತ್ತು ಪಂಗಡಗಳು ಇರಬೇಕು ಎಂದು ಹೇಳಿದ್ದಾರೆ.
ಮಂಗಳವಾರ, ಮೇಘವಾಲ್ ಅವರು ಸರ್ಕಾರ ಮತ್ತು ನ್ಯಾಯಾಂಗವು ಒಟ್ಟಾಗಿ ರೂಪಿಸಿದ ನಿಯಮಗಳ ಮೆಮೊರಾಂಡಮ್ ಆಫ್ ಪ್ರೊಸೀಜರ್ನಲ್ಲಿ ಪರಿಹಾರವನ್ನು ಕಂಡುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
"ನಾವು ಖಂಡಿತವಾಗಿಯೂ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳುತ್ತೇವೆ ಎಂದು ನಾನು ನಂಬುತ್ತೇನೆ" ಎಂದು ಕಾನೂನು ಸಚಿವರು ಹೇಳಿದ್ದಾರೆ.
ಕಳೆದ ವರ್ಷ ಜನವರಿಯಲ್ಲಿ, ಮಾಜಿ ಕಾನೂನು ಸಚಿವ ಕಿರಣ್ ರಿಜಿಜು ಅವರು ಪರಿಷ್ಕೃತ ಮೆಮೊರಾಂಡಮ್ ಆಫ್ ಪ್ರೊಸೀಜರ್ ಅಂತಿಮಗೊಳಿಸುವಿಕೆ ಬಾಕಿಯಿದೆ ಎಂದು ಹೇಳಿದ್ದರು.







