Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐದು ವರ್ಷಗಳಲ್ಲಿ ಕೇವಲ 24 ಪ್ರಕರಣಗಳಲ್ಲಿ...

ಐದು ವರ್ಷಗಳಲ್ಲಿ ಕೇವಲ 24 ಪ್ರಕರಣಗಳಲ್ಲಿ ತನಿಖೆಗೆ ಆದೇಶಿಸಿದ ಲೋಕಪಾಲ; ಆರು ಪ್ರಕರಣಗಳಲ್ಲಿ ಕಾನೂನು ಕ್ರಮಕ್ಕೆ ಅನುಮತಿ

ವಾರ್ತಾಭಾರತಿವಾರ್ತಾಭಾರತಿ18 Jan 2025 3:41 PM IST
share
ಐದು ವರ್ಷಗಳಲ್ಲಿ ಕೇವಲ 24 ಪ್ರಕರಣಗಳಲ್ಲಿ ತನಿಖೆಗೆ ಆದೇಶಿಸಿದ ಲೋಕಪಾಲ; ಆರು ಪ್ರಕರಣಗಳಲ್ಲಿ ಕಾನೂನು ಕ್ರಮಕ್ಕೆ ಅನುಮತಿ

ಹೊಸದಿಲ್ಲಿ: ಲೋಕಪಾಲ ಕಾಯ್ದೆಯು ಅಂಗೀಕಾರಗೊಂಡು 12 ವರ್ಷಗಳ ಮತ್ತು ದೇಶದ ಮೊದಲ ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲ ಕಾರ್ಯ ನಿರ್ವಹಿಸಲು ಆರಂಭಿಸಿದ ಐದು ವರ್ಷಗಳ ಬಳಿಕ ಅದು ಕೇವಲ 24 ಪ್ರಕರಣಗಳಲ್ಲಿ ತನಿಖೆಗೆ ಆದೇಶಿಸಿದೆ ಮತ್ತು ಆರು ಪ್ರಕರಣಗಳಲ್ಲಿ ಕಾನೂನು ಕ್ರಮಕ್ಕೆ ಅನುಮತಿಯನ್ನು ನೀಡಿದೆ ಎನ್ನುವುದನ್ನು ದತ್ತಾಂಶಗಳು ತೋರಿಸಿವೆ ಎಂದು thehindu.com ವರದಿ ಮಾಡಿದೆ.

ಸರಕಾರಿ ನೌಕರರು ಮತ್ತು ಜನಪ್ರತಿನಿಧಿಗಳ ವಿರುದ್ಧ ದೂರುಗಳ ತನಿಖೆ ನಡೆಸುವ ಅಧಿಕಾರವನ್ನು ಹೊಂದಿರುವ ಲೋಕಪಾಲ ಕಳೆದ ವರ್ಷದ ಅಕ್ಟೋಬರ್ ಮತ್ತು ಡಿಸೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಮೂರು ದೂರುಗಳನ್ನು ಸ್ವೀಕರಿಸಿತ್ತು.

ಲೋಕಪಾಲ ಕಳೆದ ಐದು ವರ್ಷಗಳಲ್ಲಿ ಸುಮಾರು ಶೇ.90ರಷ್ಟು ದೂರುಗಳನ್ನು ಅವುಗಳನ್ನು ಸರಿಯಾದ ಸ್ವರೂಪದಲ್ಲಿ ಸಲ್ಲಿಸಿಲ್ಲ ಎಂಬ ಕಾರಣದಲ್ಲಿ ತಿರಸ್ಕರಿಸಿದೆ. ಇದೇ ಅವಧಿಯಲ್ಲಿ ಯಾವುದೇ ಲೋಪವಿಲ್ಲದ ಕನಿಷ್ಠ 2,320 ದೂರುಗಳು ಲೋಕಪಾಲದಲ್ಲಿ ದಾಖಲಾಗಿದ್ದು, ಈ ಪೈಕಿ 226 ದೂರುಗಳು 2024 ಎಪ್ರಿಲ್ ಮತ್ತು ಡಿಸೆಂಬರ್ ನಡುವೆ ದಾಖಲಾಗಿವೆ.

ಒಟ್ಟು ದೂರುಗಳ ಶೇ.3ರಷ್ಟು ಪ್ರಧಾನಿ/ಸಂಸದರು/ಕೇಂದ್ರಸಚಿವರ ವಿರುದ್ಧ ದಾಖಲಾಗಿದ್ದರೆ,ಶೇ.21ರಷ್ಟು ದೂರುಗಳು ಕೇಂದ್ರ ಸರಕಾರದ ಎ,ಬಿ,ಸಿ ಅಥವಾ ಡಿ ಗುಂಪಿನ ಅಧಿಕಾರಿಗಳ ವಿರುದ್ಧ ಸಲ್ಲಿಕೆಯಾಗಿವೆ. ಕೇಂದ್ರ ಸರಕಾರದ ಸಂಸ್ಥೆಗಳ ಅಧ್ಯಕ್ಷರು ಅಥವಾ ಸದಸ್ಯರ ವಿರುದ್ಧ ಶೇ.35ರಷ್ಟು ಮತ್ತು ರಾಜ್ಯ ಸರಕಾರಗಳ ಅಧಿಕಾರಿಗಳು ಸೇರಿದಂತೆ ‘ಇತರರು’ ವರ್ಗದ ವಿರುದ್ಧ ಶೇ.41ರಷ್ಟು ದೂರುಗಳು ದಾಖಲಾಗಿವೆ.

ಲೋಕಪಾಲ ಮತ್ತು ಲೋಕಾಯುಕ್ತ ಕಾಯ್ದೆ,2013ರ ಕಲಂ 53ರ ಪ್ರಕಾರ ಆರೋಪಿತ ಅಪರಾಧ ನಡೆದ ದಿನಾಂಕದಿಂದ ಏಳು ವರ್ಷಗಳಲ್ಲಿ ದೂರನ್ನು ಸಲ್ಲಿಸಿದರೆ ಮಾತ್ರ ಅದನ್ನು ಪರಿಗಣಿಸಬಹುದು.

ವಿಳಂಬಿತ ನೇಮಕಾತಿ

ಲೋಕಪಾಲ ಕಾಯ್ದೆಯು 2013ರಲ್ಲಿಯೇ ಅಂಗೀಕಾರಗೊಂಡಿತ್ತಾದರೂ ದೇಶದ ಮೊದಲ ಲೋಕಪಾಲ ನ್ಯಾ.ಪಿನಾಕಿ ಚಂದ್ರ ಘೋಷ ಮತ್ತು ಎಂಟು ಸದಸ್ಯರು 2019,ಮಾ.19ರಂದು ನೇಮಕಗೊಂಡಿದ್ದರು. ನ್ಯಾ.ಘೋಷ ಅವರು 70 ವರ್ಷ ವಯಸ್ಸಾದ ಬಳಿಕ ಮೇ 2022ರಲ್ಲಿ ಹುದ್ದೆಯಿಂದ ನಿವೃತ್ತರಾಗಿದ್ದರು. 2024 ಮಾರ್ಚ್‌ನಲ್ಲಿ ನ್ಯಾ(ನಿವೃತ್ತ).ಎ.ಎಂ.ಖನ್ವಿಲ್ಕರ್ ಅವರು ಎರಡನೇ ಲೋಕಪಾಲರಾಗಿ ನೇಮಕಗೊಂಡಿದ್ದರು.

ವಿಚಾರಣಾ ನಿರ್ದೇಶಕ ಮತ್ತು ಪ್ರಾಸಿಕ್ಯೂಷನ್ ನಿರ್ದೇಶಕರ ಹುದ್ದೆಗಳನ್ನು ಭರ್ತಿ ಮಾಡಲು ಹಲವಾರು ಸಂದರ್ಭಗಳಲ್ಲಿ ಕೇಂದ್ರ ಸರಕಾರಕ್ಕೆ ಕಳುಹಿಸಿರುವ ಪ್ರಸ್ತಾವಗಳ ನಿರ್ಧಾರಕ್ಕಾಗಿ ಲೋಕಪಾಲ ಕಾಯುತ್ತಿದೆ. ಈ ನಡುವೆ ಪ್ರಾಥಮಿಕ ವಿಚಾರಣೆಗಳು ಮತ್ತು ತನಿಖೆಗಳನ್ನು ಕೇಂದ್ರ ಜಾಗ್ರತ ಆಯೋಗ(ಸಿವಿಸಿ) ಮತ್ತು ಸಿಬಿಐಗೆ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X