79ನೇ ಸ್ವಾತಂತ್ರ್ಯ ದಿನಾಚರಣೆ |ಭಾರತ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ: ಪ್ರಧಾನಿ ಮೋದಿ

Photo | indiatoday
ಹೊಸದಿಲ್ಲಿ: 79ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ದಿಲ್ಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಪರಮಾಣು ಬೆದರಿಕೆಯನ್ನು ಸಹಿಸುವುದಿಲ್ಲ ಎಂದು ಪಾಕಿಸ್ತಾನಕ್ಕೆ ಸಂದೇಶವನ್ನು ನೀಡಿದರು.
ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ನಿರ್ಧಾರಕ್ಕೆ ಸಂಬಂಧಿಸಿದಂತೆ ನೆರೆಯ ಪಾಕಿಸ್ತಾನದಿಂದ ಪರಮಾಣು ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವನ್ನು ನೀಡಿದ್ದಾರೆ.
ಸಿಂಧೂ ನದಿ ನೀರು ಹಂಚಿಕೆಗಾಗಿ ಭಾರತ ಮತ್ತು ಪಾಕಿಸ್ತಾನ ನಡುವೆ 1960ರಲ್ಲಿ ಸಿಂಧೂ ನದಿ ನೀರು ಒಪ್ಪಂದಕ್ಕೆ ಸಹಿ ಹಾಕಲಾಯಿತು. ಏಪ್ರಿಲ್ 22ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಅಮಾಯಕರು ಮೃತಪಟ್ಟ ನಂತರ ಇದನ್ನು ಸ್ಥಗಿತಗೊಳಿಸಲಾಯಿತು. ನೀರು ಮತ್ತು ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.
ಇದೇ ವೇಳೆ ಭಾರತ ಸರಕಾರ ದೇಶದ ರೈತರ ಹಿತಾಸಕ್ತಿಗಳ ಬಗ್ಗೆ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ರೈತರು ದೇಶವನ್ನು ಸ್ವಾವಲಂಬಿಯನ್ನಾಗಿ ಮಾಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.





