ತಕ್ಷಣದಿಂದ ಜಾರಿಗೆ ಬರುವಂತೆ ಪಾಕಿಸ್ತಾನದಿಂದ ನೇರ, ಪರೋಕ್ಷ ಆಮದಿಗೆ ಭಾರತ ನಿಷೇಧ

Security at the Attari-Wagah border checkpost (PTI)
ಹೊಸದಿಲ್ಲಿ: ಭಾರತವು ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ. ಈ ಕುರಿತು ವಾಣಿಜ್ಯ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
ವಿದೇಶಿ ವ್ಯಾಪಾರ ನೀತಿ (FTP) 2023ಕ್ಕೆ ಈ ನಿಟ್ಟಿನಲ್ಲಿ ಒಂದು ನಿಬಂಧನೆಯನ್ನು ಸೇರಿಸಲಾಗಿದೆ.
"ಮುಂದಿನ ಆದೇಶಗಳವರೆಗೆ ಪಾಕಿಸ್ತಾನದಿಂದ ಆಮದಾಗುವ ಎಲ್ಲಾ ಸರಕುಗಳ
ಸಾಗಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ", ಎಂದು ಮೇ 2 ರ ಅಧಿಸೂಚನೆಯಲ್ಲಿ ತಿಳಿಸಿದೆ.
ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತಾಸಕ್ತಿಯಲ್ಲಿ ಗಮನದಲ್ಲಿಟ್ಟುಕೊಂಡು ಈ ನಿರ್ಬಂಧವನ್ನು ವಿಧಿಸಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ (DGFT) ಅಧಿಸೂಚನೆಯಲ್ಲಿ ತಿಳಿಸಿದೆ.
Next Story





