ಪಾಕಿಸ್ತಾನದ ವಿಮಾನಗಳಿಗೆ ಭಾರತದ ವಾಯುಪ್ರದೇಶ ಬಳಕೆಗೆ ನಿಷೇಧ

ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರಕಾರವು ಪಾಕಿಸ್ತಾನ ವಿಮಾನಯಾನ ಸಂಸ್ಥೆಗಳು ತನ್ನ ವಾಯುಪ್ರದೇಶ ಬಳಸುವುದನ್ನು ಬುಧವಾರ ನಿಷೇಧಿಸಿದೆ.
ಪಾಕಿಸ್ತಾನ ವಿಮಾನಯಾನ ಸಂಸ್ಥೆಗಳು ಭಾರತೀಯ ವಾಯುಪ್ರದೇಶ ಬಳಸುವುದನ್ನು ನಿಷೇಧಿಸುವಂತೆ ವಾಯುಪಡೆಗೆ ನೋಟಾಮ್ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನವು ಭಾರತೀಯ ವಿಮಾನಯಾನ ಸಂಸ್ಥೆಗಳು ತನ್ನ ವಾಯುಪ್ರದೇಶ ಬಳಸುವುದನ್ನು ನಿಷೇಧಿಸಿದ ಒಂದು ವಾರದ ನಂತರ ಈ ಬೆಳವಣಿಗೆ ನಡೆದಿದೆ.
Next Story





