ಒಡಿಶಾ ಕರಾವಳಿಯಲ್ಲಿ ಸಮಗ್ರ ವಾಯು ರಕ್ಷಣಾ ಶಸ್ತ್ರಾಸ್ತ್ರ ವ್ಯವಸ್ಥೆಯ ಚೊಚ್ಚಲ ಕ್ಷಿಪಣಿ ಪ್ರಯೋಗ ಯಶಸ್ವಿ

pc : X/@rajnathsingh
ಹೊಸ ದಿಲ್ಲಿ: ಭಾರತವು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಚೊಚ್ಚಲ ಸಮಗ್ರ ರಕ್ಷಣಾ ಶಸ್ತ್ರಾಸ್ತ್ರ ವ್ಯವಸ್ಥೆಯ ಪರೀಕ್ಷಾರ್ಥ ಪ್ರಯೋಗವು ಶನಿವಾರ ಒಡಿಶಾದ ಕರಾವಳಿಯಲ್ಲಿ ಯಶಸ್ವಿಯಾಗಿದೆ.
ಈ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಹಾಗೂ ಸಶಸ್ತ್ರ ಪಡೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಜ್ ನಾಥ್ ಸಿಂಗ್, “ಈ ವಿಶಿಷ್ಟ ಉಡಾವಣಾ ಪರೀಕ್ಷೆಯು ನಮ್ಮ ದೇಶದ ಬಹುಪದರದ ವಾಯು ರಕ್ಷಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ. ಈ ಕ್ಷಿಪಣಿ ವೈಮಾನಿಕ ದಾಳಿಗಳಿಗೆ ತಿರುಗೇಟು ನೀಡಲಿದೆ” ಎಂದು ಶ್ಲಾಘಿಸಿದ್ದಾರೆ.
ಸ್ಥಳೀಯ ಕಾಲಮಾನ 12.30ಕ್ಕೆ ಈ ಕ್ಷಿಪಣಿಯನ್ನು ಒಡಿಶಾ ಕರಾವಳಿಯಲ್ಲಿ ಉಡಾವಣೆ ಮಾಡುವ ಮೂಲಕ ಪರೀಕ್ಷೆಗೊಳಪಡಿಸಲಾಯಿತು.
Next Story





