ಕುವೈತ್ನಿಂದ ಹೈದರಾಬಾದ್ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ : ಮುಂಬೈನಲ್ಲಿ ತುರ್ತು ಭೂಸ್ಪರ್ಶ

Photo| indiatoday
ಮುಂಬೈ: ಬಾಂಬ್ ಬೆದರಿಕೆ ಹಿನ್ನೆಲೆ ಕುವೈತ್ನಿಂದ ಹೈದರಾಬಾದ್ಗೆ ಹಾರಾಟ ನಡೆಸುತ್ತಿದ್ದ ಇಂಡಿಗೋ ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಇಂಡಿಗೋ ವಿಮಾನ (6E-1234) ಬಾಂಬ್ ಬೆದರಿಕೆಯ ನಂತರ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ ಸಂದೇಶ ಬಂದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ವಿಮಾನವನ್ನು ಮುಂಬೈನಲ್ಲಿ ತುರ್ತು ಸ್ಪರ್ಶ ಮಾಡುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ ಬಳಿಕ ಭದ್ರತಾ ತಪಾಸಣೆಗಾಗಿ ಪ್ರತ್ಯೇಕ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ.
Next Story





