"ಆಂಧ್ರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ": ರಾಷ್ಟ್ರಪತಿ ಆಳ್ವಿಕೆಗೆ ಜಗನ್ ಆಗ್ರಹ

ವೈಎಸ್ಆರ್ಸಿಪಿ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ (Photo: PTI)
ಅಮರಾವತಿ: ಆಂಧ್ರಪ್ರದೇಶದಲ್ಲಿ ಟಿಡಿಪಿ ನೇತೃತ್ವದ ಎನ್ಡಿಎ ಸರ್ಕಾರದ ಆಡಳಿತದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕೆಂದು ವೈಎಸ್ಆರ್ಸಿಪಿ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ವೈಎಸ್ಆರ್ಸಿಪಿ ನಾಯಕರು ಮತ್ತು ಕಾರ್ಯಕರ್ತರನ್ನು ಸುಳ್ಳು ಆರೋಪಗಳಲ್ಲಿ ಬಂಧಿಸಲಾಗುತ್ತಿದ್ದು, ರಾಜಕೀಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಜಗನ್ ಅವರು ಟಿಡಿಪಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
"ರಾಜ್ಯದಲ್ಲಿ ರಾಜಕಾರಣಿಗಳು ಮತ್ತು ಸಾಮಾನ್ಯ ಜನರಿಗೆ ಯಾವುದೇ ರಕ್ಷಣೆಯಿಲ್ಲ. ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತವಾಗಿದೆ. ಸಂವಿಧಾನದ ಉಲ್ಲಂಘನೆಯ ಕಾರ್ಯಗಳು ನಡೆಯುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬಾರದೇಕೆ?" ಎಂದು ಜಗನ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದಾರೆ.
ಗುಂಟೂರು ಜಿಲ್ಲೆಯ ಮನ್ನಾವ ಗ್ರಾಮದಲ್ಲಿ, ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ದಲಿತ ನಾಯಕ ನಾಗಮಲ್ಲೇಶ್ವರ ರಾವ್ ಅವರ ಮೇಲೆ ಹಗಲು ಹೊತ್ತಿನಲ್ಲಿ ನಡೆದ ಹಲ್ಲೆ ಘಟನೆ ರಾಜ್ಯದ ಅರಾಜಕತೆಯ ಸಾಕ್ಷ್ಯವಾಗಿದೆ ಎಂದು ಅವರು ಆರೋಪಿಸಿದ್ದಾರೆ.
"ಟಿಡಿಪಿ ಸರ್ಕಾರವನ್ನು ವಿರೋಧಿಸುವವರ ಮೇಲೆ ದಾಳಿಗಳು ನಡೆಯುತ್ತಿವೆ. ವೈಎಸ್ಆರ್ಸಿಪಿ ಕಾರ್ಯಕರ್ತರು ನಿರಂತರವಾಗಿ ಹಲ್ಲೆಗೊಳಗಾಗುತ್ತಿದ್ದಾರೆ. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆಡಳಿತದಲ್ಲಿ ಜನರು ನಿಜಕ್ಕೂ ಸುರಕ್ಷಿತವಾಗಿದ್ದಾರೆಯೇ?" ಎಂದು ಅವರು ಪ್ರಶ್ನಿಸಿದ್ದಾರೆ.
రాష్ట్రంలో లా అండ్ ఆర్డర్ పూర్తిగా క్షీణించింది. రెడ్బుక్, పొలిటికల్ గవర్నన్స్లతో ఆంధ్రప్రదేశ్ రక్తమోడుతోంది. వైయస్సార్సీపీకి చెందిన నాయకులు, కార్యకర్తలపై ఒక పథకం ప్రకారం తప్పుడు కేసులు, అరెస్టులు, అదీ వీలుకాకపోతే, తనవాళ్లని ప్రోత్సహించి మరీ దాడులు చేయిస్తున్నారు. గుంటూరు… pic.twitter.com/VfNxKZRUlz
— YS Jagan Mohan Reddy (@ysjagan) July 4, 2025