ಜಮ್ಮು: ಗುಂಡುಹಾರಿಸಿಕೊಂಡು ಸಿಆರ್ಪಿಎಫ್ ಯೋಧ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ | PC : PTI
ಜಮ್ಮು: ಜಮ್ಮಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಮಂಗಳವಾರ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್)ಯ ಯೋಧನೊಬ್ಬ ತನ್ನ ಸರ್ವಿಸ್ ರೈಫಲ್ನಿಂದ ತನಗೆ ತಾನೇ ಗುಂಡಿಕ್ಕಿಕೊಂಡು ಆತ್ಮಹತ್ಯೆಗೈದಿದ್ದಾನೆ.
ರಸ್ತೆ ಉದ್ಘಾಟನಾ ಕಾರ್ಯಕ್ರಮದ ನಿಮಿತ್ತವಾಗಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಟಿಕ್ರಿ ಪ್ರದೇಶದಲ್ಲಿ ಈ ಯೋಧನನ್ನು ನಿಯೋಜಿಸಲಾಗಿತ್ತು.
ಆತ್ಮಹತ್ಯೆ ಮಾಡಿಕೊಂಡ ಯೋಧನನ್ನು ,ಮಹಾರಾಷ್ಟ್ರದ ನಿವಾಸಿ ಪ್ರವೀಣ್ ಪಾಟೀಲ್ ಎಂದು ಗುರುತಿಸಲಾಗಿದೆ.
ಪ್ರವೀಣ್ ಪಾಟೀಲ್ ಆತ್ಮಹತ್ಯೆಗೆ ಕಾರಣವೇನೆಂಬುದು ತಕ್ಷಣವೇ ತಿಳಿದುಬಂದಿಲ್ಲವೆಂದು ಸಿಆರ್ಪಿಎಫ್ ಅಧಿಕಾರಿಯೊಬ್ಬರು ತಿಳಿಸಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿರುವುದಾಗಿ ಹೇಳಿದ್ದಾರೆ.
Next Story





