Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಹಲ್ಗಾಮ್ ದಾಳಿಯಲ್ಲಿ ಪ್ರವಾಸಿಗರನ್ನು...

ಪಹಲ್ಗಾಮ್ ದಾಳಿಯಲ್ಲಿ ಪ್ರವಾಸಿಗರನ್ನು ರಕ್ಷಿಸಿ ಹುತಾತ್ಮರಾದ ಆದಿಲ್‌ ಹುಸೇನ್‌ ಪತ್ನಿಗೆ ಸರಕಾರಿ ಉದ್ಯೋಗ

ನೇಮಕಾತಿ ಪತ್ರ ಹಸ್ತಾಂತರಿಸಿದ ಲೆಫ್ಟಿನೆಂಟ್ ಗವರ್ನರ್

ವಾರ್ತಾಭಾರತಿವಾರ್ತಾಭಾರತಿ14 Jun 2025 6:59 PM IST
share
ಪಹಲ್ಗಾಮ್ ದಾಳಿಯಲ್ಲಿ ಪ್ರವಾಸಿಗರನ್ನು ರಕ್ಷಿಸಿ ಹುತಾತ್ಮರಾದ ಆದಿಲ್‌ ಹುಸೇನ್‌ ಪತ್ನಿಗೆ ಸರಕಾರಿ ಉದ್ಯೋಗ

ಹೊಸದಿಲ್ಲಿ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ವೇಳೆ ಪ್ರವಾಸಿಗರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾಗ ಭಯೋತ್ಪಾದಕರ ಗುಂಡೇಟಿಗೆ ಹುತಾತ್ಮರಾಗಿದ್ದ ಸೈಯದ್ ಆದಿಲ್ ಹುಸೇನ್ ಷಾ ಅವರ ಪತ್ನಿ ಗುಲ್ನಾಜ್ ಅಖ್ತರ್ ಅವರಿಗೆ ಜಮ್ಮುಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸರಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಅನಂತ್‌ನಾಗ್‌ ಜಿಲ್ಲೆಯ ಪಹಲ್ಗಾಮ್‌ನ ಹಪತ್ನಾರ್ ಪ್ರದೇಶದಲ್ಲಿರುವ ಆದಿಲ್ ಶಾ ಅವರ ನಿವಾಸಕ್ಕೆ ಭೇಟಿ ನೀಡಿದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಆದಿಲ್ ಶಾ ಅವರ ಪತ್ನಿ ಗುಲ್ನಾಜ್ ಅಖ್ತರ್ ಅವರಿಗೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. ಆದಿಲ್ ಶಾ ಅವರ ಕುಟುಂಬದ ಸದಸ್ಯರು ಮತ್ತು ಕೆಲವು ಸ್ಥಳೀಯರ ಜೊತೆಗೆ ಮನೋಜ್ ಸಿನ್ಹಾ ಈ ವೇಳೆ ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ಮನೋಜ್ ಸಿನ್ಹಾ, ಗುಲ್ನಾಜ್ ಅಖ್ತರ್ ಅವರಿಗೆ ಅನಂತ್‌ನಾಗ್‌ನ ಮೀನುಗಾರಿಕೆ ಇಲಾಖೆಯಲ್ಲಿ ಶಾಶ್ವತ ಉದ್ಯೋಗ ನೀಡಲಾಗಿದೆ. ಇದು ಪತಿಯ ಶೌರ್ಯಕ್ಕೆ ಸರಕಾರ ನೀಡುವ ಕೃತಜ್ಞತೆಯ ಸಂಕೇತವಾಗಿದೆ. ಆದಿಲ್ ಶಾ ಅವರ ಕುಟುಂಬಕ್ಕೆ ಈಗಾಗಲೇ ಆರ್ಥಿಕ ನೆರವು ನೀಡಲಾಗಿದೆ ಎಂದು ಹೇಳಿದರು.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮನೋಜ್ ಸಿನ್ಹಾ, ಹುತಾತ್ಮ ಸೈಯದ್ ಆದಿಲ್ ಹುಸೇನ್ ಅವರ ಕುಟುಂಬದ ಸದಸ್ಯರನ್ನು ಅನಂತ್ನಾಗ್‌ನಲ್ಲಿ ಭೇಟಿಯಾದೆ. ಅವರ ಪತ್ನಿ ಗುಲ್ನಾಜ್ ಅಖ್ತರ್ ಅವರಿಗೆ ಅನುಕಂಪದ ಆಧಾರದ ಮೇಲೆ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದೆ. ಎಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ರಕ್ಷಿಸುವಾಗ ತನ್ನ ಪ್ರಾಣವನ್ನು ತ್ಯಾಗ ಮಾಡಿದ ಆದಿಲ್ ಅವರ ಧೈರ್ಯದ ಬಗ್ಗೆ ಇಡೀ ದೇಶವೇ ಹೆಮ್ಮೆಪಡುತ್ತದೆ ಎಂದು ಹೇಳಿದರು.

Tags

pony ride operatorPahalgam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X