ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಪ್ರಚೋದನಾಕಾರಿ ಘೋಷಣೆ ಆರೋಪ: ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಕೋರಿದ JNU

Photo credit: cnbctv18.com
ಹೊಸದಿಲ್ಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿದ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ವಿಶ್ವವಿದ್ಯಾಲಯದ ಅಧಿಕಾರಿಗಳು ಪೊಲೀಸರಿಗೆ ಪತ್ರ ಬರೆದಿದ್ದಾರೆ.
ವಿದ್ಯಾರ್ಥಿಗಳು ಸೋಮವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ "ಪ್ರಚೋದನಕಾರಿ" ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಲಾಗಿದೆ.
ಜೆಎನ್ಯು ಆಡಳಿತ ಮಂಡಳಿಯು ವಸಂತ್ ಕುಂಜ್ ಎಸ್ಎಚ್ಒಗೆ ಬರೆದ ಪತ್ರದಲ್ಲಿ ಜೆಎನ್ಯುಎಸ್ಯುಗೆ ಸಂಬಂಧಿಸಿದ ವಿದ್ಯಾರ್ಥಿಗಳು ರಾತ್ರಿ 10 ಗಂಟೆ ಸುಮಾರಿಗೆ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಆರಂಭದಲ್ಲಿ ಈ ಸಭೆಯು ಜನವರಿ 5, 2020ರ ಘಟನೆಯನ್ನು ಸ್ಮರಿಸಲು ಮಾತ್ರ ಸೀಮಿತವಾಗಿತ್ತು, ಸುಮಾರು 30 ರಿಂದ 35 ವಿದ್ಯಾರ್ಥಿಗಳು ಹಾಜರಿರುವುದಾಗಿ ಹೇಳಲಾಗಿತ್ತು. ಉಮರ್ ಖಾಲಿದ್ ಮತ್ತು ಶರ್ಜಿಲ್ ಇಮಾಮ್ ಅವರ ಜಾಮೀನು ಅರ್ಜಿಗಳ ಕುರಿತು ತೀರ್ಪಿನ ನಂತರ ಕಾರ್ಯಕ್ರಮದ ಸ್ವರೂಪ ಬದಲಾಯಿತು. ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಮತ್ತು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಲಾಗಿದೆ ಎಂದು ಆರೋಪಿಸಲಾಗಿದೆ.
ಈ ಘೋಷಣೆಗಳು ಸುಪ್ರೀಂ ಕೋರ್ಟ್ನ ನಿಂದನೆ ಮತ್ತು ಜೆಎನ್ಯು ನಿಯಮಾವಳಿಗಳ ಉಲ್ಲಂಘನೆ ಎಂದು ಹೇಳಿಕೊಂಡಿದೆ.
ಜೆಎನ್ಯುಎಸ್ ಪ್ರಸ್ತುತ ಅಧ್ಯಕ್ಷೆ ಅದಿತಿ ಮಿಶ್ರಾ ಸೇರಿದಂತೆ ಹಲವಾರು ವಿದ್ಯಾರ್ಥಿಗಳ ಹೆಸರನ್ನು ಪತ್ರದಲ್ಲಿ ಹೆಸರಿಸಲಾಗಿದೆ. ಆರೋಪಿತ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮುಖ್ಯ ಭದ್ರತಾ ಅಧಿಕಾರಿ ಪೊಲೀಸರನ್ನು ಕೋರಿದ್ದಾರೆ.







