ರಾಜ್ಯಸಭೆ ಪ್ರವೇಶಿಸಿದ ಕಮಲ್ ಹಾಸನ್: ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕಾರ

ಕಮಲ್ ಹಾಸನ್ (Photo: PTI)
ಹೊಸದಿಲ್ಲಿ: ಶುಕ್ರವಾರ ಮೊಟ್ಟಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಿದ ಬಹುಭಾಷಾ ನಟ ಕಮಲ್ ಹಾಸನ್, ತಮಿಳಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
"ನಾನು ಪ್ರಮಾಣ ವಚನ ಸ್ವೀಕರಿಸಲಿದ್ದು, ನನ್ನ ಹೆಸರನ್ನು ನೋಂದಾಯಿಸಲಿದ್ದೇನೆ. ಓರ್ವ ಭಾರತೀಯನಾಗಿ ನಾನು ನನ್ನ ಕರ್ತವ್ಯ ನಿರ್ವಹಿಸಲಿದ್ದೇನೆ" ಎಂದು ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಅವರು ರಾಜ್ಯಸಭೆಗೆ ತಿಳಿಸಿದರು.
ತಮಿಳುನಾಡಿನ ಆಡಳಿತಾರೂಢ ಡಿಎಂಕೆ ನೇತೃತ್ವದ ಮೈತ್ರಿಕೂಟದ ನೆರವಿನೊಂದಿಗೆ ಕಳೆದ ಜೂನ್ ತಿಂಗಳಲ್ಲಿ ಕಮಲ್ ಹಾಸನ್ ಅವರು ಅವಿರೋಧವಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ಇದಕ್ಕೂ ಮುನ್ನ ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿದ್ದ ಅವರ ಮಕ್ಕಳ್ ನೀಧಿ ಮಯ್ಯಂ ಪಕ್ಷ, "ಜುಲೈ 25ರಂದು ಕಮಲ್ ಹಾಸನ್ ಅವರು ಸಂಸತ್ತಿನಲ್ಲಿ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಲು ನಮಗೆ ಹರ್ಷವಾಗುತ್ತಿದೆ" ಎಂದು ಹೇಳಿತ್ತು.
Next Story





