ಕರೂರು ಕಾಲ್ತುಳಿತ ಘಟನೆಯ ಎಸ್ಐಟಿ ತನಿಖೆ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋದ ಟಿವಿಕೆ

Photo credit: PTI
ಹೊಸದಿಲ್ಲಿ: ನಟ, ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್ ನಡೆಸಿದ್ದ ಚುನಾವಣಾ ಪ್ರಚಾರ ರ್ಯಾಲಿಯ ವೇಳೆ ಕರೂರಿನಲ್ಲಿ ಸಂಭವಿಸಿದ್ದ ಕಾಲ್ತುಳಿತ ಘಟನೆಯ ಕರಿತು ತನಿಖೆ ನಡೆಸಲು ತಮಿಳುನಾಡು ಸರಕಾರ ವಿಶೇಷ ತನಿಖಾ ತಂಡ ರಚಿಸಿರುವುದನ್ನು ಪ್ರಶ್ನಿಸಿ, ಬುಧವಾರ ತಮಿಳಗ ವೆಟ್ರಿ ಕಳಗಂ ಪಕ್ಷವು ಸುಪ್ರೀಂಕೋರ್ಟ್ ಮೊರೆ ಹೋಗಿದೆ.
ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಗೆ ಮನವಿ ಮಾಡಲಾಯಿತು. ಈ ಮನವಿಯನ್ನು ಪುರಸ್ಕರಿಸಿದ ಗವಾಯಿ, ಶುಕ್ರವಾರ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ, ಕರೂರು ಕಾಲ್ತುಳಿತ ಘಟನೆಯ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂಬ ಮನವಿಯನ್ನು ತಳ್ಳಿ ಹಾಕಿರುವ ಹೈಕೋರ್ಟ್ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನೂ ಶುಕ್ರವಾರದಂದೇ ನಿಗದಿಗೊಳಿಸಲಾಗಿದೆ.
Next Story





