ಕೇರಳ | ಕೆಎಸ್ಆರ್ಟಿಸಿಯಿಂದ ಕ್ಯಾನ್ಸರ್ ರೋಗಿಗಳಿಗೆ ಉಚಿತ ಪ್ರಯಾಣ ಯೋಜನೆ

ಸಾಂದರ್ಭಿಕ ಚಿತ್ರ
ತಿರುವನಂತಪುರ, ನ. 2: ಕ್ಯಾನ್ಸರ್ ರೋಗಿಗಳು ಚಿಕಿತ್ಸೆಗಾಗಿ ರಾಜ್ಯದ ಯಾವುದೇ ಆಸ್ಪತ್ರೆಗೆ ತೆರಳಲು ಉಚಿತ ಪ್ರಯಾಣ ಯೋಜನೆಯನ್ನು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) ರವಿವಾರ ಘೋಷಿಸಿದೆ.
ಈ ಹಿಂದೆ ಸಾರಿಗೆ ಸಚಿವ ಕೆ.ಬಿ. ಗಣೇಶ್ ಕುಮಾರ್, ಇಂತಹ ಯೋಜನೆಯನ್ನು ಪರಿಚಯಿಸಲಾಗುವುದು ಎಂದು ಘೋಷಿಸಿದ್ದರು.
ಕಿಮೋಥೆರಪಿ, ರೇಡಿಯೇಷನ್ ಹಾಗೂ ಇತರ ಚಿಕಿತ್ಸೆಗಳಿಗೆ ತೆರಳುವ ಕ್ಯಾನ್ಸರ್ ರೋಗಿಗಳು ಸಾಮಾನ್ಯ ಬಸ್ನಿಂದ ಸೂಪರ್ ಪಾಸ್ಟ್ ಬಸ್ ಗಳ ವರೆಗಿನ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಈಗ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ಹಾಗೂ ಆಡಳಿತ ನಿರ್ದೇಶಕ ಪ್ರಮೋಜ್ ಶಂಕರ್ ಅಕ್ಟೋಬರ್ 29ರಂದು ಹೊರಡಿಸಿದ ಆದೇಶದಲ್ಲಿ ಹೇಳಿದ್ದಾರೆ.
ಅರ್ಹ ರೋಗಿಗಳು keralartcit.com





