Kerala Local Body Election Result: 136 ಗ್ರಾಮ ಪಂಚಾಯಿತಿಗಳಲ್ಲಿ ಎಲ್ಡಿಎಫ್ ಮುನ್ನಡೆ

Photo credit: PTI
ತಿರುವನಂತಪುರಂ: ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಗಳ ಮತಎಣಿಕೆ ಪ್ರಕ್ರಿಯೆ ರಾಜ್ಯದ 244 ಕೇಂದ್ರಗಳಲ್ಲಿ ನಡೆಯುತ್ತಿದೆ.
ಈವರೆಗಿನ ಅಂಕಿ-ಅಂಶಗಳನ್ನು ಗಮನಿಸದಾಗ ರಾಜ್ಯದ 941 ಗ್ರಾಮ ಪಂಚಾಯತ್ಗಳ ಪೈಕಿ 136 ಗ್ರಾಮ ಪಂಚಾಯತ್ಗಳಲ್ಲಿ ಎಲ್ಡಿಎಫ್ ಅಭ್ಯರ್ಥಿಗಳು ಮುನ್ನಡೆಯನ್ನು ಸಾಧಿಸಿದ್ದಾರೆ. ಯುಡಿಎಫ್ ಅಭ್ಯರ್ಥಿಗಳು 113 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
2026ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ನಡೆಯುವ ಈ ಚುನಾವಣೆಯ್ನು ನಿರ್ಣಾಯಕ ಎಂದು ಪರಿಗಣಿಸಲಾಗಿದೆ. ರಾಜ್ಯ ಚುನಾವಣಾ ಆಯೋಗದ ಪ್ರಕಾರ, ಆರಂಭಿಕವಾಗಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ 387 ವಾರ್ಡ್ಗಳಲ್ಲಿ, ಸಿಪಿಐ(ಎಂ) ನೇತೃತ್ವದ ಎಲ್ಡಿಎಫ್ 283 ವಾರ್ಡ್ಗಳಲ್ಲಿ, ಬಿಜೆಪಿ ನೇತೃತ್ವದ ಎನ್ಡಿಎ 71 ವಾರ್ಡ್ಗಳಲ್ಲಿ ಮತ್ತು ಇತರರು 59 ವಾರ್ಡ್ಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
Next Story





