ಡಿ. 9, 11: ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ

ಸಾಂದರ್ಭಿಕ ಚಿತ್ರ | Photo Credit : PTI
ತಿರುವನಂತಪುರಂ, ನ. 10: ಕೇರಳದ ಸ್ಥಳೀಯ ಸ್ವಯಮಾಡಳಿತದ ಸಂಸ್ಥೆಗಳಿಗೆ ಡಿಸೆಂಬರ್ 9 ಮತ್ತು 11ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಎ. ಶಾಜಹಾನ್ ಸೋಮವಾರ ಪ್ರಕಟಿಸಿದ್ದಾರೆ.
ಇದರೊಂದಿಗೆ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ ಎಂದು ಅವರು ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದರು. ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 21 ಎಂದು ಹೇಳಿದ ಅವರು, ಅವುಗಳ ಪರಿಶೀಲನೆಯು ನವೆಂಬರ್ 22ರಂದು ನಡೆಯಲಿದೆ ಎಂದರು. ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ನವೆಂಬರ್ 24 ಕೊನೆಯ ದಿನಾಂಕವಾಗಿರುತ್ತದೆ.
ಮತದಾನವು ಡಿಸೆಂಬರ್ 9ರಂದು ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಇಡುಕ್ಕಿ, ಎರ್ನಾಕುಳಮ್ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಹಾಗೂ ಡಿಸೆಂಬರ್ 11ರಂದು ತ್ರಿಶೂರ್, ಪಾಲಕ್ಕಾಡ್, ವಯನಾಡ್, ಮಲಪ್ಪುರಂ, ಕೊಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ನಡೆಯಲಿದೆ.
Next Story





