ಕೇರಳ| ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದಾಗ ಕುಸಿದು ಬಿದ್ದ ಸಚಿವ ರಾಮಚಂದ್ರನ್

ಕಣ್ಣೂರು: ಕೇರಳದ ಕಣ್ಣೂರಿನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡುತ್ತಿದ್ದಾಗ ಸಚಿವ ಕಡನಪಲ್ಲಿ ರಾಮಚಂದ್ರನ್ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಲಾಗಿದೆ.
ಸಚಿವರು ಪರೇಡ್ ಮೈದಾನದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ಉದ್ಘಾಟನಾ ಭಾಷಣ ಮಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ಅವರನ್ನು ತಕ್ಷಣ ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಸಿದುಬಿದ್ದರೂ, ಆಂಬ್ಯುಲೆನ್ಸ್ಗೆ ಕರೆದೊಯ್ಯುವಾಗ ಪ್ರಜ್ಞೆ ಮರಳಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.
Next Story





