ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಾಕಾರಿ ಪದ ಬಳಕೆ ಪ್ರಕರಣ | ಸಿ.ಟಿ. ರವಿ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಲಕ್ಷ್ಮೀ ಹೆಬ್ಬಾಳ್ಕರ್ , ಸಿ.ಟಿ. ರವಿ | PTI
ಹೊಸದಿಲ್ಲಿ: ಕಳೆದ ವರ್ಷ ಡಿಸೆಂಬರ್ ನಲ್ಲಿ ಕರ್ನಾಟಕ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ನಾಯಕಿ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಗುರಿಯಾಗಿಸಿಕೊಂಡು ಅವಹೇಳನಾಕಾರಿ ಪದ ಬಳಸಿದ ಆರೋಪ ಎದುರಿಸುತ್ತಿದ್ದ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ನ್ಯಾಯಮೂರ್ತಿ ಎಂ.ಎಂ. ಸುಂದ್ರೇಶ್ ಮತ್ತು ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರಿದ್ದ ಪೀಠವು ಅರ್ಜಿಯ ಮೇಲ್ವಿಚಾರಣೆ ನಡೆಸಿತು.
ನೂತನ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಸೆಕ್ಷನ್ 75 (ಲೈಂಗಿಕ ಕಿರುಕುಳ) ಮತ್ತು ಸೆಕ್ಷನ್ 79 ಅಡಿಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ಈ ಹಿಂದೆ ನಿರಾಕರಿಸಿತ್ತು.
Next Story





