ಮಲಪ್ಪುರಂ| ಮನೆಯೊಂದರಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಪತ್ತೆ

ಸಾಂದರ್ಭಿಕ ಚಿತ್ರ
ಮಲಪ್ಪುರಂ : ಜಿಲ್ಲೆಯ ಮನೆಯೊಂದರಿಂದ ಭಾರೀ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡು ಮನೆಯ ಮಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯ ಮಾಲಕ ಉನ್ನಿಕಮ್ಮದ್ ಬಂಧಿತ. ಈತನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಡವಣ್ಣ ಪೊಲೀಸ್ ಠಾಣೆಯ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಗೌಪ್ಯ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಿದಾಗ ಉನ್ನಿಕಮ್ಮದ್ ನಿವಾಸದಲ್ಲಿ 20 ಏರ್ ಗನ್ಗಳು, ಮೂರು ರೈಫಲ್ಗಳು, ಸುಮಾರು 200 ಗುಂಡುಗಳು ಮತ್ತು 40 ಪೆಲೆಟ್ ಬಾಕ್ಸ್ಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಸ್ತ್ರಾಸ್ತ್ರಗಳನ್ನು ಮಾರಾಟಕ್ಕೆ ಸಂಗ್ರಹಿಸಿಡಲಾಗಿದೆಯಾ? ವೈಯಕ್ತಿಕ ಬಳಕೆಗೆ ಉದ್ದೇಶಿಸಲಾಗಿದೆಯೇ? ಬಂದೂಕುಗಳು ಮತ್ತು ಮದ್ದುಗುಂಡುಗಳನ್ನು ಎಲ್ಲಿಂದ ಖರೀದಿಸಿದ್ದಾನೆ? ಎಂಬ ಬಗ್ಗೆ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
Next Story





