ಗುಂಡೇಟಿನಿಂದಾದ ಗಾಯಕ್ಕೆ ಬ್ಯಾಂಡೇಜ್ ಹಾಕಿದಂತಿದೆ : ಕೇಂದ್ರ ಬಜೆಟ್ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ರಾಹುಲ್ ಗಾಂಧಿ (PTI)
ಹೊಸದಿಲ್ಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಕೇಂದ್ರ ಬಜೆಟ್ ನ್ನು ಟೀಕಿಸಿದ್ದಾರೆ. ಗುಂಡೇಟಿನಿಂದಾದ ಗಾಯಕ್ಕೆ ಬ್ಯಾಂಡೇಜ್ ಹಾಕಿದಂತಿದ್ದು, ಕೇಂದ್ರ ಸರಕಾರದ ಪರಿಕಲ್ಪನೆಗಳು ದಿವಾಳಿಯಾಗಿದೆ ಎಂದು ಹೇಳಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ಗುಂಟೇಟಿನಿಂದಾದ ಗಾಯಕ್ಕೆ ಬ್ಯಾಂಡೇಜ್ ಹಾಕಿದಂತಿದ್ದು, ಜಾಗತಿಕ ಅನಿಶ್ಚಿತತೆಯ ನಡುವೆ, ನಮ್ಮ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಒಂದು ಮಾದರಿ ಬದಲಾವಣೆ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-26ನೇ ಸಾಲಿನ ಬಜೆಟ್ ನ್ನು ಮಂಡಿಸಿದ್ದಾರೆ. ಬಜೆಟ್ ಮಂಡನೆ ಆರಂಭಿಸುತ್ತಿದ್ದಂತೆ ಪ್ರತಿಪಕ್ಷಗಳ ಸಂಸದರು ಮಹಾಕುಂಭದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಚರ್ಚೆ ನಡೆಸುವಂತೆ ಒತ್ತಾಯಿಸಿ ಸದನದಿಂದ ಹೊರ ನಡೆದಿದ್ದರು.
ವಿಕಸಿತ ಭಾರತ ಬಜೆಟ್- 2025 ಅನ್ನು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ನಮ್ಮ ಸರಕಾರದ ಬದ್ಧತೆಯನ್ನು ಪ್ರತಿಬಿಂಬಿಸಿದ ಈ ಬಜೆಟ್ 140 ಕೋಟಿ ಭಾರತೀಯರ ಕನಸುಗಳನ್ನು ನನಸಾಗಿಸಲಿದೆ ಎಂದು ಹೇಳಿದ್ದರು.





