ಮಣಿಪುರ ಧನ ವಿನಿಯೋಗ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

Photo : ANI
ಹೊಸದಿಲ್ಲಿ: ಬಿಹಾರ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತಂತೆ ಪ್ರತಿಪಕ್ಷದ ಸದಸ್ಯರ ಗದ್ದಲದ ನಡುವೆ ಮಣಿಪುರ ಧನ ವಿನಿಯೋಗ ಮಸೂದೆ-2025 ಅನ್ನು ಲೋಕಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು.
ಧನ ವಿನಿಯೋಗ ಮಸೂದೆಯನ್ನು ಧ್ವನಿ ಮತದ ಮೂಲಕ ಅಂಗೀಕರಿಸಿದ ಬಳಿಕ ಸದನದ ಕಲಾಪವನ್ನು ಒಂದು ದಿನದ ಮಟ್ಟಿಗೆ ಮುಂದೂಡಲಾಯಿತು. ಪ್ರತಿಪಕ್ಷದ ಸದಸ್ಯರು ಪಟ್ಟು ಸಡಿಲಿಸದೇ ಇರುವುದರಿಂದ ಯಾವುದೇ ಚರ್ಚೆ ಇಲ್ಲದೆ ಈ ಮಸೂದೆಯನ್ನು ಅಂಗೀಕರಿಸಲಾಯಿತು.
ಕಲಾಪಕ್ಕೆ ಅಡ್ಡಿಪಡಿಸುತ್ತಿರುವುದಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಪಕ್ಷವನ್ನು ತರಾಟೆಗೆ ತೆಗೆದುಕೊಂಡರು. ಮಣಿಪುರದ ಬಗ್ಗೆ ಮಾತನಾಡುವ ಪ್ರತಿಪಕ್ಷ, ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಆ ರಾಜ್ಯಕ್ಕೆ ಹಣ ಹೋಗುವುದನ್ನು ಬಯಸುತ್ತಿಲ್ಲ ಎಂದು ಹೇಳಿದರು.
Next Story





