ಗೋವಾ ನೈಟ್ಕ್ಲಬ್ ಅಗ್ನಿ ದುರಂತ ಪ್ರಕರಣ: ಲೂತ್ರಾ ಸಹೋದರರು ಥಾಯ್ಲೆಂಡ್ನಿಂದ ಭಾರತಕ್ಕೆ ಗಡೀಪಾರು

Photo|indiatoday
ಹೊಸದಿಲ್ಲಿ: ಗೋವಾದಲ್ಲಿ ಭೀಕರ ಅಗ್ನಿದುರಂತ ಸಂಭವಿಸಿದ ನೈಟ್ಕ್ಲಬ್ನ ಮಾಲಕರಾದ ಸೌರಭ್ ಮತ್ತು ಗೌರವ್ ಲೂತ್ರಾ ಅವರನ್ನು ಥಾಯ್ಲೆಂಡ್ನಿಂದ ಭಾರತಕ್ಕೆ ಗಡೀಪಾರು ಮಾಡಲಾಗಿದೆ.
25 ಮಂದಿಯ ಸಜೀವ ದಹನಕ್ಕೆ ಕಾರಣವಾಗಿದ್ದ ದುರಂತ ಸಂಭವಿಸಿದ ಬೆನ್ನಲ್ಲೇ ಮಾಲಕರಾದ ಲೂತ್ರಾ ಸಹೋದರರು ಥಾಯ್ಲೆಂಡ್ಗೆ ಪಲಾಯನ ಮಾಡಿದ್ದರು. ಅವರ ಭಾರತೀಯ ಪಾಸ್ಪೋರ್ಟ್ಗಳನ್ನು ಅಮಾನತುಗೊಳಿಸಿರುವುದರಿಂದ ಅವರನ್ನು ಗಡೀಪಾರು ಮಾಡಲಾಗಿದೆ ಎಂದು ವರದಿಯಾಗಿದೆ.
ಲೂತ್ರಾ ಸಹೋದರರು ಇಂಡಿಗೋ ವಿಮಾನದಲ್ಲಿ ಮಂಗಳವಾರ ಮಧ್ಯಾಹ್ನ 1.45ರ ಸುಮಾರಿಗೆ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪುವ ನಿರೀಕ್ಷೆಯಿದೆ.
ಗೋವಾ ಪೊಲೀಸರ ತಂಡವು ದಿಲ್ಲಿ ಪೊಲೀಸರ ಸಹಕಾರದಿಂದ ಅವರನ್ನು ವಶಕ್ಕೆ ಪಡೆಯಲಿದ್ದು, ಡಿಸೆಂಬರ್ 17ರಂದು ಮಾಪುಸಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಅವರನ್ನು ಹಾಜರುಪಡಿಸುವ ಸಾಧ್ಯತೆಯಿದೆ.
Next Story





