ಅಪ್ರಾಪ್ತ ಬಾಲಕರಿಗೆ ಲೈಂಗಿಕ ಕಿರುಕುಳ : ಮದರಸದ ಶಿಕ್ಷಕ, ಟ್ರಸ್ಟಿಯ ಬಂಧನ

Image Source : PTI
ಅಹ್ಮದಾಬಾದ್: ಹತ್ತು ಮಂದಿ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮದರಸದ 25 ವರ್ಷದ ಶಿಕ್ಷಕರೋರ್ವರನ್ನು ಗುಜರಾತ್ ನ ಜುನಾಗಢ್ ಜಿಲ್ಲೆಯಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದಲ್ಲದೆ, ಶಿಕ್ಷಕನ ವಿರುದ್ಧ ವಿದ್ಯಾರ್ಥಿಗಳು ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಆರೋಪದಲ್ಲಿ 55 ವರ್ಷದ ಮದರಸದ ಟ್ರಸ್ಟಿಯನ್ನು ಕೂಡ ಬಂಧಿಸಲಾಗಿದೆ ಎಂದು ಜುನಾಗಢ್ ಜಿಲ್ಲಾ ಪೊಲೀಸರು ಹೇಳಿದ್ದಾರೆ.
ತಲೆಮರೆಸಿಕೊಂಡಿದ್ದ ಶಿಕ್ಷಕನನ್ನು ಸೂರತ್ ನಿಂದ ಹಾಗೂ ಪರಾರಿಯಾಗಿದ್ದ ಟ್ರಸ್ಟಿಯನ್ನು ಜುನಾಗಢದಿಂದ ರವಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
17 ವರ್ಷದ ಬಾಲಕ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಇಬ್ಬರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಹಾಗೂ ಪೋಕ್ಸೊಗೆ ಸಂಬಂಧಿಸಿದ ನಿಯಮಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Next Story





