Maharashtra ಸ್ಥಳೀಯ ಸಂಸ್ಥೆ ಚುನಾವಣೆ | ಅಕ್ರಮಗಳು ನಡೆದಿವೆ; ಇದು ಪ್ರಜಾಪ್ರಭುತ್ವದ ಹತ್ಯೆ: ಉದ್ಧವ್ ಠಾಕ್ರೆ ಆರೋಪ

ಉದ್ಧವ್ ಠಾಕ್ರೆ | Photo Credit : PTI
ಮುಂಬೈ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಅಕ್ರಮಗಳು ನಡೆದಿದ್ದು, ಇದು ಪ್ರಜಾಪ್ರಭುತ್ವದ ಹತ್ಯೆಗೆ ಮಾಡಿದ ಪ್ರಯತ್ನವಾಗಿದೆ ಎಂದು ಗುರುವಾರ ಶಿವಸೇನೆ (ಉದ್ಧವ್ ಬಣ)ದ ಮುಖ್ಯಸ್ಥ ಉದ್ಧವ್ ಠಾಕ್ರೆ ಆರೋಪಿಸಿದ್ದಾರೆ.
ನಗರ ಪಾಲಿಕೆಗಳ ಚುನಾವಣೆಯಲ್ಲಿ ಅಕ್ರಮಗಳು ನಡೆದಿರುವ ಆರೋಪದ ಹಿನ್ನೆಲೆಯಲ್ಲಿ, ರಾಜ್ಯ ಮುಖ್ಯ ಚುನಾವಣಾ ಆಯುಕ್ತರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆಗ್ರಹಿಸಿದ್ದಾರೆ.
ಗುರುವಾರ ಮುಂಬೈ ಸೇರಿದಂತೆ ಮಹಾರಾಷ್ಟ್ರ ರಾಜ್ಯದ 29 ನಗರ ಪಾಲಿಕೆಗಳ ಚುನಾವಣೆಗೆ ಮತದಾನ ನಡೆಯಿತು.
ಸುದ್ದಿಗಾರರೊಂದಿಗೆ ಮಾತನಾಡಿದ ಉದ್ಧವ್ ಠಾಕ್ರೆ, ಚುನಾವಣಾ ಆಯೋಗವು ಸಂವಿಧಾನ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದರು. ಚುನಾವಣಾ ಆಯೋಗ ಹಾಗೂ ಸರಕಾರ ಪರಸ್ಪರ ಕೈಜೋಡಿಸಿವೆ ಎಂದು ಆರೋಪಿಸಿದ ಅವರು, ರಾಜ್ಯ ಮುಖ್ಯ ಚುನಾವಣಾ ಆಯುಕ್ತ ದಿನೇಶ್ ವಾಘ್ಮರೆಯನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.
Next Story





