Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಭವನಕ್ಕೆ ಭೇಟಿ ನೀಡಿದ ಮಾಲ್ದೀವ್ಸ್...

ರಾಜಭವನಕ್ಕೆ ಭೇಟಿ ನೀಡಿದ ಮಾಲ್ದೀವ್ಸ್ ಅಧ್ಯಕ್ಷ ಮುಯಿಝ್ಝು

ವಾರ್ತಾಭಾರತಿವಾರ್ತಾಭಾರತಿ9 Oct 2024 6:04 PM IST
share
ರಾಜಭವನಕ್ಕೆ ಭೇಟಿ ನೀಡಿದ ಮಾಲ್ದೀವ್ಸ್ ಅಧ್ಯಕ್ಷ ಮುಯಿಝ್ಝು

ಬೆಂಗಳೂರು: ಭಾರತದ ಪ್ರವಾಸದಲ್ಲಿರುವ ಮಾಲ್ದೀವ್ಸ್ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝ್ಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದು, ಕರ್ನಾಟಕದ ರಾಜಭವನಕ್ಕೆ ಸೌಹಾರ್ದಯುತ ಭೇಟಿ ನೀಡಿದರು.

ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲ್ದೀವ್ಸ್ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝ್ಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರನ್ನು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು.

ಮಾಲ್ದೀವ್ಸ್ ನಿಂದ ಬಂದಿರುವ ಅತಿಥಿಗಳಿಗೆ ಸ್ವಾಗತ ಕೋರಿ ಮಾತನಾಡಿದ ಗೌರವಾನ್ವಿತ ರಾಜ್ಯಪಾಲರು, ಗೌರವಾನ್ವಿತ ರಾಷ್ಟ್ರಪತಿ, ಗೌರವಾನ್ವಿತ ಉಪರಾಷ್ಟ್ರಪತಿ ಮತ್ತು ಗೌರವಾನ್ವಿತ ಪ್ರಧಾನ ಮಂತ್ರಿಯವರೊಂದಿಗಿನ ಗೌರವಾನ್ವಿತ ಮಾಲ್ಡೀವ್ಸ್ ಅಧ್ಯಕ್ಷರ ಉತ್ತೇಜಕ ಸಭೆಗಳು ಮತ್ತು ಸೌಜನ್ಯದ ಭೇಟಿಗಳು ದ್ವಿಪಕ್ಷೀಯ ಸಂಬಂಧಗಳ ಕುರಿತು ನಮ್ಮ ಎರಡು ದೇಶಗಳ ಜನರ ನಡುವಿನ ಸೌಹಾರ್ದ ಸಂಬಂಧವನ್ನು ಮತ್ತಷ್ಟು ಬಲಪಡಿಸಿದೆ ಎಂದು ಹೇಳಿದರು.

ಮಾಲ್ದೀವ್ಸ್ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಭಾರತದ ಪ್ರಮುಖ ಪಾಲುದಾರ ಮತ್ತು ನಿಕಟ ಸ್ನೇಹಿತ ಮತ್ತು ನೆರೆಯ ರಾಷ್ಟ್ರವಾಗಿದೆ. ಭಾರತವು ಶತಮಾನಗಳ-ಹಳೆಯ ಸಾಂಸ್ಕೃತಿಕ, ಆರ್ಥಿಕ, ವ್ಯಾಪಾರ ಮತ್ತು ಜನರ ಸಂಬಂಧಗಳನ್ನು ಹೊಂದಿದೆ. ಭಾರತದ ‘ನೆರೆಹೊರೆ ಮೊದಲು' ಮತ್ತು ‘ಸಾಗರ್ ವಿಷನ್' ನೀತಿಯಲ್ಲಿ ಮಾಲ್ಡೀವ್ಸ್ ಪ್ರಮುಖ ಸ್ಥಾನವನ್ನು ಹೊಂದಿದೆ. ಕರೆನ್ಸಿ ಸ್ವಾಪ್ ಸೌಲಭ್ಯದ ಸಹಿಯು ಮಾಲ್ದೀವ್ಸ್ ನೊಂದಿಗಿನ ನಮ್ಮ ಸ್ನೇಹ ಸಂಬಂಧಗಳಿಗೆ ಸರ್ಕಾರದ ಬಲವಾದ ಬದ್ಧತೆಯನ್ನು ಪ್ರದರ್ಶಿಸುತ್ತದೆ. ಇತ್ತೀಚಿನ ದಿನಗಳಲ್ಲಿ, ವಾಯು ಸಂಪರ್ಕ ಮತ್ತು ವೀಸಾ ಸೌಲಭ್ಯಗಳ ವಿಸ್ತರಣೆಯು ನಮ್ಮನ್ನು ಪರಸ್ಪರ ಹತ್ತಿರಕ್ಕೆ ತಂದಿದೆ. ರುಪೇ ಕಾರ್ಡ್ ಅನ್ನು ಮಾಲ್ಡೀವ್ಸ್ ನಲ್ಲಿ ಪ್ರಾರಂಭಿಸಲಾಗಿದೆ ಎಂಬುದನ್ನು ತಿಳಿದು ಸಂತೋಷವಾಗಿದೆ ಎಂದು ಹೇಳಿದರು.

ಮಾಲ್ದೀವ್ಸ್ ಅಡ್ಡುವಿನಲ್ಲಿ ಭಾರತೀಯ ದೂತಾವಾಸ ಮತ್ತು ಬೆಂಗಳೂರಿನಲ್ಲಿ ಮಾಲ್ದೀವ್ಸ್ ದೂತಾವಾಸವನ್ನು ತೆರೆಯುವ ಬಗ್ಗೆ ಚರ್ಚೆಗಳು ನಡೆದಿವೆ. ಈ ವಿಷಯ ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರುತ್ತದೆ ಎಂಬ ವಿಶ್ವಾಸವಿದೆ. ಇದು ಭಾರತೀಯರಿಗೆ ಮಾಲ್ದೀವ್ಸ್ ಗೆ ಭೇಟಿ ನೀಡಲು ಮತ್ತು ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಲು ಸಹಾಯ ಮಾಡುತ್ತದೆ. ನಿಮ್ಮ ಭೇಟಿಯ ಸಮಯದಲ್ಲಿ ಪ್ರಾಜೆಕ್ಟ್ ಗಳ ಉದ್ಘಾಟನೆ ಮತ್ತು ಹಲವಾರು ತಿಳುವಳಿಕಾ ಒಪ್ಪಂದಗಳು, ಶ್ರೇಷ್ಠತೆ, ನಮ್ಮ ಬಲವಾದ ಅಭಿವೃದ್ಧಿ ಪಾಲುದಾರಿಕೆಯನ್ನು ಪ್ರತಿಬಿಂಬಿಸುತ್ತದೆ - ಇದು ನಮ್ಮ ಆಧಾರವಾಗಿದೆ. ಇದು ದ್ವಿಪಕ್ಷೀಯ ಸಂಬಂಧಗಳ ಪ್ರಮುಖ ಆಧಾರವಾಗಿದೆ. ಘನತೆವೆತ್ತ ಅಧ್ಯಕ್ಷರು, ಅಭಿವೃದ್ಧಿ, ಸಹಕಾರ, ಸಾಮಥ್ರ್ಯ ವೃದ್ಧಿ, ವ್ಯಾಪಾರ ಮತ್ತು ವಾಣಿಜ್ಯ, ಭಾರತ-ಮಾಲ್ಡೀವ್ಸ್ ಸಂಬಂಧಗಳು ಮತ್ತಷ್ಟು ಶಕ್ತಿ ಒದಗಿಸಲಿದೆ ಎಂದು ರಾಜ್ಯಪಾಲರು ತಿಳಿಸಿದರು.

ಮಾಲ್ದೀವ್ಸ್ ಅಧ್ಯಕ್ಷರೊಂದಿಗೆ ಒಂದು ವ್ಯಾಪಾರ ನಿಯೋಗ ಬಂದಿರುವುದು ಸಂತೋಷಕರ. ಬೆಂಗಳೂರು ಭಾರತದ ಐಟಿ ಕೇಂದ್ರವಾಗಿದೆ. ಬೆಂಗಳೂರಿನಲ್ಲಿ ವ್ಯಾಪಾರ ಸಮುದಾಯದೊಂದಿಗಿನ ನಿಮ್ಮ ಸಂವಹನವು ನಮ್ಮ ಆರ್ಥಿಕ ಮತ್ತು ವಾಣಿಜ್ಯ ಸಂಬಂಧಗಳನ್ನು ಇನ್ನಷ್ಟು ಬಲಪಡಿಸುತ್ತದೆ ಎಂಬ ನಂಬಿಕೆ ಇದೆ. ಗೌರವಾನ್ವಿತರೇ, ಭಾರತಕ್ಕೆ ಭೇಟಿ ನೀಡಿದ್ದಕ್ಕಾಗಿ ಮತ್ತು ನಮ್ಮ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಲು ನಿಮ್ಮ ಆಲೋಚನೆಗಳನ್ನು ಹಂಚಿಕೊಂಡಿದ್ದಕ್ಕಾಗಿ ನಿಮಗೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮಾಲ್ದೀವ್ಸ್ ನ ಜನರ ಪ್ರಗತಿ ಮತ್ತು ಸಮೃದ್ಧಿಗೆ ನಾವು ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಮಾಲ್ಡೀವ್ಸ್ ಅಧ್ಯಕ್ಷರು ಮತ್ತು ಪ್ರಥಮ ಮಹಿಳೆ ನೇತೃತ್ವದ ಮಾಲ್ಡೀವ್ಸ್‍ನ ನಿಯೋಗ ಬೆಂಗಳೂರಿಗೆ ಭೇಟಿ ನೀಡಿರುವುದು ಹಾಗೂ ಮಾಲ್ಡೀವ್ಸ್ ಪ್ರಥಮ ಮಹಿಳೆ ಬೆಂಗಳೂರಿನಲ್ಲಿ ವಿದ್ಯಾರ್ಥಿಯಾಗಿದ್ದರು ಎಂಬುದು ತಿಳಿದು ಸಂತೋಷವಾಗಿದೆ. ಮಾಲ್ಡೀವ್ಸ್ ಸರ್ಕಾರವು ಬೆಂಗಳೂರಿನ ಪ್ರಮುಖ ಐಟಿ ಉದ್ಯಮದೊಂದಿಗೆ ಸಹಭಾಗಿತ್ವವನ್ನು ಹೊಂದಲು ಆಸಕ್ತಿ ಹೊಂದಿದೆ ಎಂಬುದನ್ನು ಅರ್ಥಮಾಡಿಕೊಳ್ಳಲಾಗಿದೆ. ಬೆಂಗಳೂರು ಭಾರತದ ಸಿಲಿಕಾನ್ ವ್ಯಾಲಿ ಎಂದು ಕರೆಯುತ್ತೇವೆ ಮತ್ತು ಸ್ಟಾರ್ಟ್-ಅಪ್‍ಗಳು, ಕೃತಕ ಬುದ್ಧಿಮತ್ತೆ, ಜಾಗತಿಕ ಸಾಮಥ್ರ್ಯ ನಿರ್ಮಾಣ ಕೇಂದ್ರಗಳು ಮತ್ತು ಇನ್ನೋವೇಶನ್ ಹಬ್‍ಗಾಗಿ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಮಾಲ್ದೀವ್ಸ್ ನಲ್ಲಿ ಐಟಿ ಉದ್ಯಮದ ಬೆಳವಣಿಗೆಯನ್ನು ಸುಲಭಗೊಳಿಸಲು ಹರ್ಷಿಸುತ್ತೇವೆ. ಮಾಲ್ದೀವ್ಸ್ ಗೆ ಭೇಟಿ ನೀಡುವ ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ತಲುಪಲು ನಮ್ಮ ಕರಕುಶಲ ಮತ್ತು ಕೈಮಗ್ಗಗಳ ಮಾರುಕಟ್ಟೆಯನ್ನು ಉತ್ತೇಜಿಸಲು ಮಾಲ್ದೀವ್ಸ್ ನೊಂದಿಗೆ ವ್ಯಾಪಾರ ಸಂಬಂಧಗಳನ್ನು ಹೊಂದಲು ಇಚ್ಚಿಸುತ್ತೇವೆ. ಕರ್ನಾಟಕವು ತನ್ನ ಪ್ರಕೃತಿಯ ವೈವಿಧ್ಯತೆ, ಸಂಸ್ಕೃತಿ ಮತ್ತು ಶ್ರೀಮಂತ ಪರಂಪರೆಗೆ ಹೆಸರುವಾಸಿಯಾಗಿದೆ. ನಮ್ಮ ಕವಿ ಕುವೆಂಪು ಅವರು ಕರ್ನಾಟಕವನ್ನು "ಸರ್ವ ಜನಾಂಗದ ಶಾಂತಿಯ ತೋಟ" ಎಂದು ಕರೆದಿದ್ದಾರೆ. ನಮ್ಮ ಪ್ರವಾಸೋದ್ಯಮ ಅಡಿಬರಹ - "ಒಂದು ರಾಜ್ಯ, ಹಲವು ಪ್ರಪಂಚಗಳು". ಸುಮಾರು 300 ಕಿಮೀ ಕರಾವಳಿಯ ಹೊರತಾಗಿ, ನಾವು ವಿಶ್ವದ ಎರಡನೇ ಅತಿ ದೊಡ್ಡ ಶೋಲಾ ಅರಣ್ಯವನ್ನು ಹೊಂದಿರುವ ಹುಲಿ ಮತ್ತು ಪಕ್ಷಿಧಾಮಗಳನ್ನು ಹೊಂದಿದ್ದೇವೆ. ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವಿನಿಮಯವನ್ನು ಉತ್ತೇಜಿಸಲು ಮಾಲ್ಡೀವ್ಸ್‍ನೊಂದಿಗೆ ಪಾಲುದಾರಿಕೆಯನ್ನು ಎದರು ನೋಡುತ್ತಿದ್ದೇವೆ" ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮಾಲ್ದೀವ್ಸ್ ಅಧ್ಯಕರಾದ ಡಾ. ಮೊಹಮ್ಮದ್ ಮುಯಿಝ್ಝು ಮಾತನಾಡಿ, ಭಾರತಕ್ಕೆ ಭೇಟಿ ನೀಡಲು ಆಹ್ವಾನ ನೀಡಿದಂತಹ ಗೌರವಾನ್ವಿತ ರಾಷ್ಟ್ರಪತಿ, ಪ್ರಧಾನಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಹಾಗೆಯೇ, ಬೆಂಗಳೂರಿನಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು, ಆತಿಥ್ಯ ನೀಡಿದ ರಾಜ್ಯಪಾಲರಿಗೆ ಹಾಗೂ ಮುಖ್ಯಮಂತ್ರಿಗಳಿಗೂ ಧನ್ಯಾವಾದಗಳನ್ನು ಸಲ್ಲಿಸುತ್ತೇನೆ. ಭಾರತದಲ್ಲಿ ಬಹಳ ಹೆಸರು ಮಾಡಿರುವ ಕರ್ನಾಟಕ ರಾಜ್ಯಕ್ಕೆ ಅದರಲ್ಲೂ ಬೆಂಗಳೂರಿಗೆ ಭೇಟಿ ನೀಡಿರುವುದು ಬಹಳ ಖುಷಿಯಾಗಿದೆ. ಕರ್ನಾಟಕದಲ್ಲಿ ಮಾಲ್ಡೀವ್ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಸಹಕಾರ ನೀಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಸತ್ಯವತಿ.ಜಿ ಸೇರಿದಂತೆ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X