ಪುಣೆ: ಕೊರಿಯರ್ ಡೆಲಿವರಿ ಬಾಯ್ ಸೋಗಿನಲ್ಲಿ ಫ್ಲ್ಯಾಟ್ ಗೆ ನುಗ್ಗಿ ಯುವತಿಯ ಮೇಲೆ ಅತ್ಯಾಚಾರ

ಸಾಂದರ್ಭಿಕ ಚಿತ್ರ (PTI)
ಪುಣೆ: ಕೊರಿಯರ್ ಡೆಲಿವರಿ ಬಾಯ್ ಎಂದು ತನ್ನನ್ನು ಗುರುತಿಸಿಕೊಂಡಿರುವ ಅಪರಿಚಿತ ದುಷ್ಕರ್ಮಿಯೊಬ್ಬ, ಫ್ಲ್ಯಾಟ್ ಒಂದರೊಳಗೆ ಪ್ರವೇಶಿಸಿ, 22 ವರ್ಷದ ಯುವತಿಯೋರ್ವಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ ಎಂದು ಗುರುವಾರ ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದ ಪುಣೆ ನಗರದಲ್ಲಿನ ಕೊಂಧ್ವಾ ಪ್ರದೇಶದಲ್ಲಿರುವ ಹೌಸಿಂಗ್ ಸೊಸೈಟಿ ಒಂದರಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಫ್ಲ್ಯಾಟ್ ನಲ್ಲಿ ಯುವತಿ ಒಂಟಿಯಾಗಿದ್ದಳು. ಆಕೆಯ ಸಹೋದರ ಕೆಲಸಕ್ಕೆಂದು ತೆರಳಿದ್ದ. ಬುಧವಾರ ರಾತ್ರಿ ಸುಮಾರು 8 ಗಂಟೆಗೆ ಕೊರಿಯರ್ ಡೆಲಿವರಿ ಬಾಯ್ ಸೋಗಿನಲ್ಲಿ ಅಲ್ಲಿಗೆ ಬಂದಿರುವ ದುಷ್ಕರ್ಮಿಯೊಬ್ಬ, ಫ್ಲ್ಯಾಟ್ ಒಳಗೆ ಪ್ರವೇಶಿಸಿ, ಯುವತಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಆರೋಪಿಯು ಯುವತಿಯ ಮೇಲೆ ಪೆಪ್ಪರ್ ಸ್ಪ್ರೇ ಮಾಡಿ ಈ ದುಷ್ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





