Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೆಣ್ಣುಮಕ್ಕಳು ಇಷ್ಟವಿಲ್ಲ ಎಂದು ನವಜಾತ...

ಹೆಣ್ಣುಮಕ್ಕಳು ಇಷ್ಟವಿಲ್ಲ ಎಂದು ನವಜಾತ ಅವಳಿ ಶಿಶುಗಳನ್ನೇ ಕೊಂದ ತಂದೆ

ವಾರ್ತಾಭಾರತಿವಾರ್ತಾಭಾರತಿ10 July 2024 1:33 PM IST
share
ಹೆಣ್ಣುಮಕ್ಕಳು ಇಷ್ಟವಿಲ್ಲ ಎಂದು ನವಜಾತ ಅವಳಿ ಶಿಶುಗಳನ್ನೇ ಕೊಂದ ತಂದೆ

ಹೊಸದಿಲ್ಲಿ: ಹೆಣ್ಣುಮಕ್ಕಳು ಇಷ್ಟವಿಲ್ಲ ಎಂದು ತನ್ನ ನವಜಾತ ಅವಳಿ ಶಿಶುಗಳನ್ನೇ ಹತ್ಯೆ ಮಾಡಿದ ಆರೋಪದಲ್ಲಿ ದಿಲ್ಲಿ ಪೊಲೀಸರು ಬುಧವಾರ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಆರೋಪಿಯನ್ನು ನೀರಜ್ ಸೋಲಂಕಿ ಎಂದು ಗುರುತಿಸಲಾಗಿದ್ದು, ಪುತ್ರಿಯರು ಬೇಡ ಎಂಬ ಕಾರಣಕ್ಕೆ ಜೂನ್ 3ರಂದು ಈ ಕೃತ್ಯ ಎಸಗಿ ಮೃತದೇಹಗಳನ್ನು ಹೂತುಹಾಕಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. 32 ವರ್ಷ ವಯಸ್ಸಿನ ಆರೋಪಿಯನ್ನು ಹರ್ಯಾಣದಲ್ಲಿ ಬಂಧಿಸಲಾಗಿದೆ.

ಹರ್ಯಾಣದ ರೋಹ್ಟಕ್‍ನ ಸೆಕ್ಟರ್ 36ರಲ್ಲಿ ಮೇ 30ರಂದು ಸೋಳಂಕಿ ಪತ್ನಿ ಪೂಜಾ ಸೋಳಂಕಿ ಅವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡಿದ್ದರು. ಈ ದಂಪತಿ ದೆಹಲಿಯ ಸುಲ್ತಾನಪುರಿ ಪ್ರದೇಶದಲ್ಲಿ ವಾಸವಿದ್ದರು.

ಆರೋಪಿ ನಿರಂತರವಾಗಿ ತನ್ನ ಸ್ಥಳವನ್ನು ಬದಲಾಯಿಸಿಕೊಂಡು, ದಿಲ್ಲಿ ಮತ್ತು ಹರ್ಯಾಣದಲ್ಲಿ ತಲೆ ಮರೆಸಿಕೊಂಡಿದ್ದ. ಈತನ ಪತ್ನಿ ಜೂನ್ 21ರಂದು ನೀಡಿದ ದೂರಿನ ಮೇರೆಗೆ ಆರೋಪಿ ವಿರುದ್ಧ ಹತ್ಯೆ ಪ್ರಕರಣ ದಾಖಲಿಸಲಾಗಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಬ್ಬರು ಹೆಣ್ಣುಮಕ್ಕಳ ಹತ್ಯೆ ಬಗ್ಗೆ ಜೂನ್ 3ರಂದು ಸುಲ್ತಾನಪುರಿ ಠಾಣೆಯಿಂದ ದೂರವಾಣಿ ಕರೆ ಬಂದ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಲಾಗಿತ್ತು. ತನ್ನ ಭಾವ 3 ದಿನದ ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಹೂತುಹಾಕಿದ್ದಾನೆ ಎಂದು ಆರೋಪಿಯ ಭಾವ ದೂರು ನೀಡಿದರು.

ದೆಹಲಿ ವಿವಿ ಪದವೀಧರನಾಗಿರುವ ಸೋಳಂಕಿಯನ್ನು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಅವರಿಂದ ಅನುಪತಿ ಪಡೆದು ಬಂಧಿಸಲಾಗಿದೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.

Tags

New-born Twin DaughtersKillsDaughters
share
ವಾರ್ತಾಭಾರತಿ
ವಾರ್ತಾಭಾರತಿ
Next Story
X