Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿವಾಹ ಪ್ರಸ್ತಾವನೆ ಮದುವೆಯಲ್ಲಿ...

ವಿವಾಹ ಪ್ರಸ್ತಾವನೆ ಮದುವೆಯಲ್ಲಿ ಅಂತ್ಯವಾಗಲಿಲ್ಲ ಎಂಬುದು ವಂಚನೆಯಾಗದು: ಸುಪ್ರೀಂ ಕೋರ್ಟ್‌

ವಾರ್ತಾಭಾರತಿವಾರ್ತಾಭಾರತಿ28 Feb 2024 4:14 PM IST
share
ವಿವಾಹ ಪ್ರಸ್ತಾವನೆ ಮದುವೆಯಲ್ಲಿ ಅಂತ್ಯವಾಗಲಿಲ್ಲ ಎಂಬುದು ವಂಚನೆಯಾಗದು: ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ವಿವಾಹ ಪ್ರಸ್ತಾವನೆ ಫಲಪ್ರದವಾಗಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬನ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

“ವಿವಾಹ ಪ್ರಸ್ತಾವನೆಯೊಂದನ್ನು ಪ್ರಾರಂಭಿಸಲು ಮತ್ತು ಅದು ನಿರೀಕ್ಷಿತ ಫಲ ನೀಡದೇ ವಿಫಲವಾಗಲು ಹಲವಾರು ಕಾರಣಗಳಿರಬಹುದು,” ಎಂದು ರಾಜು ಕೃಷ್ಣ ಶೆಡ್ಬಲ್ಕರ್‌ ಎಂಬಾತನ ವಿರುದ್ಧ ದಾಖಲಾದ ವಂಚನೆ ಪ್ರಕರಣವನ್ನು ವಜಾಗೊಳಿಸುವ ವೇಳೆ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಪ್ರಸನ್ನ ಬಿ ವರಳೆ ಅವರ ಪೀಠ ಹೇಳಿದೆ.

ಕರ್ನಾಟಕ ಹೈಕೋರ್ಟ್‌ ಸೆಕ್ಷನ್‌ 417 ಅಡಿಯಲ್ಲಿ ತನ್ನನ್ನು ದೋಷಿಯೆಂದು ಘೋಷಿಸಿ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ರಾಜು ಕೃಷ್ಣ 2021ರಲ್ಲಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ್ದರು. ಈ ಸೆಕ್ಷನ್‌ ಅಡಿಯಲ್ಲಿ ಒಂದು ವರ್ಷದ ತನಕ ಜೈಲು ಶಿಕ್ಷೆ ಅಥವಾ ಎರಡನ್ನೂ ವಿಧಿಸಬಹುದಾಗಿದೆ.

“ವಂಚನೆ ಪ್ರಕರಣ ದಾಖಲಿಸಲು ಆರಂಭದಿಂದಲೂ ವಂಚನೆಯ ಉದ್ದೇಶವಿರಬೇಕು ಎಂದು ಈ ಕೋರ್ಟ್‌ ಪುನರುಚ್ಛರಿಸಿದೆ. ಆದರೆ ಈ ಪ್ರಕರಣದಲ್ಲಿ ಅರ್ಜಿದಾರನ ವಿರುದ್ಧದ ದೂರಿನಲ್ಲಿ ಅದು ಕಾಣಿಸುತ್ತಿಲ್ಲ,” ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ತನ್ನನ್ನು ವಿವಾಹವಾಗದೆ ರಾಜು ಕೃಷ್ಣ ವಂಚಿಸಿದ್ದಾನೆಂದು ಮಹಿಳೆಯೊಬ್ಬಳು ನೀಡಿದ್ದ ದೂರಿನ ಆಧಾರದ ಮೇಲೆ ಆತ, ಆತನ ಸಹೋದರರು, ಸಹೋದರಿ ಹಾಗೂ ತಾಯಿಯ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಎರಡೂ ಕುಟುಂಬಗಳ ನಡುವೆ ಮಾತುಕತೆ ನಡೆದಿತ್ತು ಹಾಗೂ ತಾನು ಮತ್ತು ರಾಜು ಪರಸ್ಪರ ಮಾತನಾಡುತ್ತಿದ್ದೆವು. ತನ್ನ ತಂದೆ ವಿವಾಹ ಮಂಟಪ ಬುಕ್‌ ಮಾಡಲು ರೂ. 75000 ಕೂಡ ಪಾವತಿಸಿದ್ದರು, ಆದರೆ ರಾಜು ಬೇರೆ ವಿವಾಹವಾಗಿದ್ದು ನಂತರ ತಿಳಿದು ಬಂತು ಎಂದು ಯುವತಿ ದೂರಿದ್ದಳು.

ಕರ್ನಾಟಕ ಹೈಕೋರ್ಟ್‌ ರಾಜು ಹೊರತುಪಡಿಸಿ ಎಲ್ಲಾ ಆರೋಪಿತರ ವಿರುದ್ಧದ ಪ್ರಕರಣ ಕೈಬಿಟ್ಟಿತ್ತು.

ಆದರೆ ಯುವತಿಯನ್ನು ವಂಚಿಸುವ ಯಾವುದೇ ಉದ್ದೇಶ ಅರ್ಜಿದಾರನಿಗಿತ್ತು ಎಂಬುದಕ್ಕೆ ಯಾವುದೇ ಆಧಾರವಿಲ್ಲ ಎಂದು ಹೈಕೋರ್ಟ್‌ ಆದೇಶವನ್ನು ಬದಿಗೆ ಸರಿಸಿ ಸುಪ್ರೀಂ ಕೋರ್ಟ್‌ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X