ಸಂಸತ್ನಲ್ಲಿ ಭಾರೀ ಭದ್ರತಾ ಲೋಪ : ಗುರುವಾರ ಪ್ರತಿಪಕ್ಷಗಳ ನಾಯಕರಿಂದ ರಾಷ್ಟ್ರಪತಿ ಭೇಟಿ
Photo: PTI
ಹೊಸದಿಲ್ಲಿ: ಸಂಸತ್ತಿನಲ್ಲಿ ಬುಧವಾರ ಸಂಭವಿಸಿದ ಭಾರೀ ಭದ್ರತಾ ಲೋಪಕ್ಕೆ ಸಂಬಂಧಿಸಿ ಪ್ರತಿಪಕ್ಷಗಳ ನಾಯಕರ ನಿಯೋಗವೊಂದು ಗುರುವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದೆ.
ಈ ಘಟನೆ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉಭಯ ಸದನಗಳಲ್ಲಿ ಹೇಳಿಕೆ ನೀಡುವಂತೆ ಪ್ರತಿಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ.
ಈ ನಡುವೆ ಸಂಸತ್ತಿನ ಭದ್ರತೆಯ ಮರು ಪರಿಶೀಲನೆಗೆ ಕೋರಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಗೃಹ ಸಚಿವಾಲಯಕ್ಕೆ ಪತ್ರ ಬರೆಯುವ ಸಾಧ್ಯತೆ ಇದೆ. ಲೋಕಸಭೆಯಲ್ಲಿ ನಡೆದ ಘಟನೆಯ ಕುರಿತಂತೆ ಚರ್ಚೆ ನಡೆಸಲು ಆಯೋಜಿಸಲಾಗಿದ್ದ ಸಭೆಯಲ್ಲಿ ಓಂ ಬಿರ್ಲಾ ಅವರು ರಾಜಕೀಯ ಪಕ್ಷಗಳ ನಾಯಕರಿಗೆ ಈ ವಿಷಯ ತಿಳಿಸಿದ್ದಾರೆ.
Next Story