Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಾರಿ ತಪ್ಪಿಸುವ ಗುಟ್ಕಾ ಜಾಹೀರಾತು ;...

ದಾರಿ ತಪ್ಪಿಸುವ ಗುಟ್ಕಾ ಜಾಹೀರಾತು ; ಶಾರುಕ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ಸಮನ್ಸ್

ವಾರ್ತಾಭಾರತಿವಾರ್ತಾಭಾರತಿ8 March 2025 8:50 PM IST
share
ದಾರಿ ತಪ್ಪಿಸುವ ಗುಟ್ಕಾ ಜಾಹೀರಾತು ; ಶಾರುಕ್ ಖಾನ್, ಅಜಯ್ ದೇವಗನ್, ಟೈಗರ್ ಶ್ರಾಫ್‌ಗೆ ಸಮನ್ಸ್

ಜೈಪುರ: ಗುಟ್ಕಾ ಬ್ರಾಂಡ್‌ ಗಳಿಗೆ ಸಂಬಂಧಿಸಿದ ದಾರಿ ತಪ್ಪಿಸುವ ಜಾಹೀರಾತು ನೀಡಿದ ಆರೋಪದಲ್ಲಿ ಬಾಲಿವುಡ್ ನಟರಾದ ಶಾರುಕ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್‌ಗೆ ಜೈಪುರದ ಜಿಲ್ಲಾ ಗ್ರಾಹಕ ಆಯೋಗ ಸಮನ್ಸ್ ನೀಡಿದೆ.

ಐಐಎಫ್‌ಎ ಪ್ರಶಸ್ತಿಯ ಬೆಳ್ಳಿ ಹಬ್ಬದ ಕಾರ್ಯಕ್ರಮಕ್ಕಾಗಿ ಶಾರುಕ್ ಖಾನ್ ಜೈಪುರಕ್ಕೆ ಆಗಮಿಸಿದ ಸಂದರ್ಭ ಅವರಿಗೆ ಈ ಸಮನ್ಸ್ ನೀಡಲಾಗಿದೆ. ಕೇಸರಿ ಮಿಶ್ರಿತ ಗುಟ್ಕಾ ಪ್ರಚಾರದ ಜಾಹೀರಾತಿನಲ್ಲಿ ಮಾಡಲಾದ ಪ್ರತಿಪಾದನೆ ಕುರಿತಂತೆ ಮಾರ್ಚ್ 19ರ ಒಳಗೆ ಪ್ರತಿಕ್ರಿಯೆ ನೀಡುವಂತೆ ಶಾರುಕ್ ಖಾನ್‌ಗೆ ಅದು ಸೂಚಿಸಿದೆ.

ಇದೇ ರೀತಿಯ ನೋಟಿಸನ್ನು ಅಜಯ್ ದೇವಗನ್, ಟೈಗರ್ ಶ್ರಾಫ್ ಹಾಗೂ ಗುಟ್ಕಾ ಉತ್ಪಾದನಾ ಕಂಪೆನಿಯ ಅಧ್ಯಕ್ಷರಿಗೆ ರವಾನಿಸಲಾಗಿದೆ. ಗ್ರಾಹಕ ಹಕ್ಕುಗಳ ಹೋರಾಟಗಾರ ಯೋಗೇಂದ್ರ ಸಿಂಗ್ ಬಡಿಯಾಲ್ ಅವರು ಸಲ್ಲಿಸಿದ ದೂರಿನ ಹಿನ್ನೆಲೆಯಲ್ಲಿ ಆಯೋಗದ ಅಧ್ಯಕ್ಷರಾದ ಗ್ಯಾರ್ಸಿಲಾಲ್ ಮೀನಾ ಹಾಗೂ ಸದಸ್ಯೆ ಹೇಮಲತಾ ಅಗರ್ವಾಲ್ ಅವರು ಈ ಸಮನ್ಸ್ ಜಾರಿಗೊಳಿಸಿದ್ದಾರೆ.

‘‘ಕಣ ಕಣದಲ್ಲೂ ಕೇಸರಿ’’ ಎಂದು ಹೇಳುವ ಮೂಲಕ ಗುಟ್ಕಾ ಉತ್ಪಾದಕ ಜೆ.ಬಿ. ಇಂಡಸ್ಟ್ರೀಸ್ ತನ್ನ ಜಾಹೀರಾತುಗಳಲ್ಲಿ ದಾರಿತಪ್ಪಿಸುವ ಪ್ರತಿಪಾದನೆಯನ್ನು ಮಾಡುತ್ತಿದೆ ಎಂದು ದೂರು ಆರೋಪಿಸಿದೆ.

ಕೇಸರಿಯ ಬೆಲೆ ಪ್ರತಿ ಕಿ.ಗ್ರಾಂ.ಗೆ ಸರಿಸುಮಾರು 4 ಲಕ್ಷ ರೂ. ಇದೆ. ಆದರೆ, ಗುಟ್ಕಾ ಕೇವಲ ಪ್ರತಿ ಪ್ಯಾಕೇಟ್‌ಗೆ 5 ರೂ.ಗೆ ಮಾರಾಟವಾಗುತ್ತಿದೆ. ಆದುದರಿಂದ ಈ ಪ್ರತಿಪಾದನೆ ವಾಸ್ತವ ಅಲ್ಲ ಎಂದು ದೂರು ದಾರ ಗಮನಸೆಳೆದಿದ್ದಾರೆ.

ಉತ್ನನ್ನ ಕೇಸರಿಯನ್ನಾಗಲಿ, ಪರಿಮಳವನ್ನಾಗಲಿ ಹೊಂದಿಲ್ಲ. ಆದರೂ ಗಣ್ಯರು ಇದನ್ನು ಪ್ರಚಾರ ಮಾಡುವುದನ್ನು ಮುಂದುವರಿಸಿದ್ದಾರೆ. ಇದು ಗ್ರಾಹಕರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ದೂರುದಾರರು ತಿಳಿಸಿದ್ದಾರೆ.

ಇಂತಹ ವಂಚಿಸುವ ಜಾಹೀರಾತುಗಳು ಗುಟ್ಕಾ ಬಳಕೆಯನ್ನು ಉತ್ತೇಜಿಸುವುದು ಮಾತ್ರವಲ್ಲ, ಬದಲಾಗಿ ಆರೋಗ್ಯಕ್ಕೆ ಅಪಾಯವನ್ನು ಕೂಡ ತಂದೊಡ್ಡಲಿದೆ ಎಂದು ದೂರುದಾರರು ಪ್ರತಿಪಾದಿಸಿದ್ದಾರೆ. ಇಂತಹ ದಾರಿ ತಪ್ಪಿಸುವ ಪ್ರಚಾರ ಅಭಿಯಾನವನ್ನು ನಿಷೇಧಿಸುವಂತೆ ದೂರುದಾರರು ಆಡಳಿತವನ್ನು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X