ತಮಿಳುನಾಡು | ಗಾಝಾ ನರಮೇಧ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಲಿರುವ ಸಿಎಂ ಸ್ಟಾಲಿನ್

ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ (Photo: PTI)
ಚೆನ್ನೈ: ಗಾಝಾ ನರಮೇಧವನ್ನು ಖಂಡಿಸಿ ತಮಿಳುನಾಡಿನ ಚೆನ್ನೈನಲ್ಲಿ ಸಿಪಿಐ(ಎಂ) ಪಕ್ಷವು ಆಯೋಜಿಸಿರುವ ಬೃಹತ್ ಪ್ರತಿಭಟನೆಯಲ್ಲಿ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಅವರು ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಇಸ್ರೇಲ್ ಗಾಝಾ ಮೇಲೆ ಮಿಲಿಟರಿ ಕಾರ್ಯಾಚರಣೆಯನ್ನು ಆರಂಭಿಸಿದಾಗಿನಿಂದ ಗಾಝಾದಲ್ಲಿ 20,000 ಮಕ್ಕಳು ಸೇರಿದಂತೆ 67,000ಕ್ಕೂ ಹೆಚ್ಚು ಜನರನ್ನು ಹತ್ಯೆ ಮಾಡಿದೆ. ಈ ನರಮೇಧವನ್ನು ಖಂಡಿಸಿ ಚೆನ್ನೈನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಕೆ.ವೀರಮಣಿ, ವೈಕೊ, ತಮಿಳುನಾಡು ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಸೆಲ್ವಪೆರುಂಥಗೈ, ವಿಸಿಕೆ ಮುಖ್ಯಸ್ಥ ಥೋಲ್. ತಿರುಮಾವಲವನ್, ಟಿಎಂಎಂಕೆ ನಾಯಕ ಪ್ರೊ. ಜವಾಹರುಲ್ಲಾ ಮತ್ತು ಎಡಪಕ್ಷದ ನಾಯಕರು ಸೇರಿದಂತೆ ಹಿರಿಯ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
Next Story





