Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ʼಫ್ಯಾಸಿಸಂʼ ವಿರೋಧಿ ಸಮಾವೇಶದಲ್ಲಿ...

ʼಫ್ಯಾಸಿಸಂʼ ವಿರೋಧಿ ಸಮಾವೇಶದಲ್ಲಿ ಪಾಲ್ಗೊಳ್ಳಲು ರಾಜ್ಯಸಭಾ ಸಂಸದನಿಗೆ ಅನುಮತಿ ನಿರಾಕರಿಸಿದ ಮೋದಿ ಸರಕಾರ

ವಿದೇಶಾಂಗ ಸಚಿವರಿಗೆ ಪತ್ರ ಬರೆದ ಸಿಪಿಐ(ಎಂ) ನಾಯಕ

ವಾರ್ತಾಭಾರತಿವಾರ್ತಾಭಾರತಿ1 Nov 2024 6:41 PM IST
share
CPI(M) Rajya Sabha MP Dr V Sivadasan and External Affairs Minister S Jaishankar

ಹೊಸದಿಲ್ಲಿ: ವೆನೆಝುವೆಲಾದಲ್ಲಿ ನಡೆಯಲಿರುವ ಫ್ಯಾಸಿಸಂ ವಿರೋಧಿ ಸಮಾವೇಶದಲ್ಲಿ ಭಾಗವಹಿಸಲು ತೆರಳಲಿರುವ ಸಿಪಿಐ(ಎಂ) ರಾಜ್ಯಸಭಾ ಸಂಸದ ಡಾ.ವಿ.ಶಿವದಾಸನ್‌ಗೆ ಕೇಂದ್ರ ಸರಕಾರ ಅನುಮತಿ ನಿರಾಕರಿಸಿದೆ.

ಶಿವದಾಸನ್ ಅವರು ಶುಕ್ರವಾರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ನಿರ್ಧಾರವನ್ನು ವಿರೋಧಿಸಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ. ಸಂಸದರಾಗಿರುವ ತಮ್ಮ ಹಕ್ಕುಗಳ ಮೇಲಿನ ದಾಳಿ ಇದು ಎಂದಿರುವ ಅವರು , ಈ ನಿರ್ಧಾರದಿಂದ ತಾನು ದಿಗ್ಭ್ರಮೆಗೊಂಡಿದ್ದೇನೆ ಎಂದು ಹೇಳಿದ್ದಾರೆ.

ನವೆಂಬರ್ 4-6 ರಂದು ವೆನೆಝುವೆಲಾದ ರಾಜಧಾನಿ ಕ್ಯಾರಕಾಸ್‌ನಲ್ಲಿ ಆಯೋಜಿಸಲಾಗಿರುವ ಫ್ಯಾಸಿಸಂ ವಿರೋಧಿ ಸಮಾವೇಶದಲ್ಲಿ ಹಾಜರಾಗಲು ಅವಕಾಶ ನೀಡದ ಸರ್ಕಾರದ ನಿರ್ಧಾರವು ಆರೆಸ್ಸೆಸ್ - ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನಿಲುವನ್ನು ಮತ್ತೊಮ್ಮೆ ಬಹಿರಂಗಪಡಿಸಿದೆ ಎಂದು ಕೇರಳದ ರಾಜ್ಯಸಭಾ ಸದಸ್ಯ ಡಾ.ವಿ.ಶಿವದಾಸನ್‌ ಸುದ್ದಿಗಾರರಿಗೆ ತಿಳಿಸಿದರು.

ಆರೆಸ್ಸೆಸ್-ಬಿಜೆಪಿ ಸತ್ಯಗಳಿಗೆ ಹೆದರುತ್ತಿದೆ. ವೆನೆಝುವೆಲಾದ ಸಂಸತ್ತಿನಿಂದ ತಮಗೆ ಆಹ್ವಾನ ನೀಡಿರುವ ಸಮಾರಂಭದಲ್ಲಿ ಆರೆಸ್ಸೆಸ್ - ಬಿಜೆಪಿಯ ಬಗ್ಗೆ ಸತ್ಯವನ್ನು ಮಾತನಾಡುವುದನ್ನು ತಡೆಯಲು ಬಯಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಇತ್ತೀಚೆಗೆ ರೂಪುಗೊಂಡ ಅಂತರರಾಷ್ಟ್ರೀಯ ಸೌರ ಒಕ್ಕೂಟ ಮತ್ತು ಅಲಿಪ್ತ ಚಳುವಳಿ (NAM) ಸೇರಿದಂತೆ ಹಲವು ಬಹುಪಕ್ಷೀಯ ವೇದಿಕೆಗಳಲ್ಲಿ ಎರಡೂ ದೇಶಗಳು ಉತ್ತಮ ಸಂಬಂಧಗಳಿವೆ. ಇದೇ ಸಂದರ್ಭದಲ್ಲಿ ಸಮಾವೇಶದಲ್ಲಿ ಭಾಗವಹಿಸಲು ಅನುಮತಿ ನಿರಾಕರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

" ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಪ್ರಸ್ತಾವನೆಯನ್ನು ಪರಿಶೀಲಿಸಿದೆ. ರಾಜಕೀಯ ದೃಷ್ಟಿ ಕೋನದಿಂದ ಅನುಮತಿ ನಿರಾಕರಿಸಲಾಗಿದೆ,” ಎಂದು ವಿದೇಶಾಂಗ ಸಚಿವಾಲಯವು ಶಿವದಾಸನ್‌ಗೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X