ಇರಾನ್ ಅಧ್ಯಕ್ಷರ ಜತೆ ಮೋದಿ ಫೋನ್ ಸಂಭಾಷಣೆ; ಉದ್ವಿಗ್ನತೆ ಶಮನಕ್ಕೆ ಆಗ್ರಹ

ಹೊಸದಿಲ್ಲಿ: ಇಸ್ರೇಲ್-ಇರಾನ್ ಸಂಘರ್ಷದಲ್ಲಿ ಅಮೆರಿಕ ಹಸ್ತಕ್ಷೇಪ ಮಾಡುತ್ತಿದ್ದಂತೆಯೇ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಇರಾನ್ ಅಧ್ಯಕ್ಷ ಮಸೂದ್ ಪೆಝೆಶ್ಕಿಯಾನ್ ಜತೆ ದೂರವಾಣಿ ಸಂಭಾಷಣೆ ನಡೆಸಿ, ಉದ್ವಿಗ್ನ ಪರಿಸ್ಥಿತಿ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.
ತಕ್ಷಣವೇ ಉದ್ವಿಗ್ನತೆ ಶಮನ ಮತ್ತು ಶಾಂತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಭಾರತ ಹಿತಾಸಕ್ತಿಗೆ ಈ ಭಾಗದ ಶಾಂತಿ ಹಾಗೂ ಸ್ಥಿರತೆ ಅತ್ಯಂತ ಪ್ರಮುಖ ಎಂದು ಮೋದಿ ತಿಳಿಸಿದರು.
ಇರಾನ್ ಮೇಲೆ ಅಮೆರಿಕ ದಾಳಿ ನಡೆಸಿದ ಬೆನ್ನಲ್ಲೇ ಇರಾನ್ ಅಧ್ಯಕ್ಷರು ಪ್ರಧಾನಿ ನರೇಂದ್ರ ಮೋದಿ ಜತೆಗೆ ಮಾತುಕತೆ ನಡೆಸಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದರು. 45 ನಿಮಿಷಗಳ ಸಂಭಾಷಣೆಯಲ್ಲಿ ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಭಾರತ ಇರಾನ್ ನ ಸ್ನೇಹಿತ ಮತ್ತು ಪಾಲುದಾರ ಎಂದು ಇರಾನ್ ಅಧ್ಯಕ್ಷರು ವಿಶ್ಲೇಷಿಸಿದರು.
Next Story





