ನಾಲ್ಕೈದು ದಿನಗಳಲ್ಲಿ ಮುಂಗಾರು ಕೇರಳ ಪ್ರವೇಶಿಸಲಿದೆ: ಐಎಂಡಿ

ಸಾಂದರ್ಭಿಕ ಚಿತ್ರ | PC : PTI
ಹೊಸದಿಲ್ಲಿ: ವಾಡಿಕೆಯ ದಿನಾಂಕಕ್ಕಿಂತ ಮುಂಚಿತವಾಗಿ ಮುಂದಿನ ನಾಲ್ಕೈದು ದಿನಗಳಲ್ಲಿ ನೈಋತ್ಯ ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ಭಾರತದ ಹವಾಮಾನ ಇಲಾಖೆ ಮಂಗಳವಾರ ತಿಳಿಸಿದೆ.
ಈ ಹಿಂದೆ ಹವಾಮಾನ ಇಲಾಖೆ ಮೇ 27ರ ವೇಳೆಗೆ ಮುಂಗಾರು ಕೇರಳ ಪ್ರವೇಶಿಸಲಿದೆ ಎಂದು ಹೇಳಿತ್ತು.
ಒಂದು ವೇಳೆ ನಿರೀಕ್ಷೆಯಂತೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶಿಸಿದರೆ, 2009ರ ಬಳಿಕ ಭಾರತದ ಮುಖ್ಯ ಭೂಭಾಗದಲ್ಲಿ ವಾಡಿಕೆಗಿಂತ ಮುನ್ನ ಮುಂಗಾರು ಪ್ರವೇಶಿಸಿರುವುದು ಇದೇ ಮೊದಲು ಎಂದು ಹವಾಮಾನ ಇಲಾಖೆ ಹೇಳಿದೆ.
ಸಾಮಾನ್ಯವಾಗಿ ನೈಋತ್ಯ ಮುಂಗಾರು ಜೂನ್ 1ರಂದು ಕೇರಳ ಪ್ರವೇಶಿಸುತ್ತದೆ. ಜುಲೈ 8ರ ವೇಳೆಗೆ ಸಂಪೂರ್ಣ ದೇಶವನ್ನು ವ್ಯಾಪಿಸುತ್ತದೆ. ಸುಮಾರು ಸೆಪ್ಟಂಬರ್ 17ರ ಹೊತ್ತಿಗೆ ವಾಯುವ್ಯ ಭಾರತದಿಂದ ಹಿಂದೆ ಸರಿಯಲು ಆರಂಭಿಸುತ್ತದೆ ಹಾಗೂ ಅಕ್ಟೋಬರ್ 15ರ ವೇಳೆಗೆ ಸಂಪೂರ್ಣವಾಗಿ ಹಿಮ್ಮೆಟ್ಟುತ್ತದೆ.
Next Story





