ಅತ್ಯಂತ ದುರದೃಷ್ಟಕರ: ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಬ್ರಿಜ್ ಭೂಷಣ್ ಪ್ರತಿಕ್ರಿಯೆ

Photo: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ | PTI
ಹೊಸದಿಲ್ಲಿ: ಮಣಿಪುರದಲ್ಲಿ ನಡೆದ ಘಟನೆ ಅತ್ಯಂತ ಹೇಯ ಹಾಗೂ ದುರದೃಷ್ಟಕರ ಎಂದು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಹೇಳಿದ್ದಾರೆ.
ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಜಾಮೀನು ಪಡೆದಿರುವ ಭಾರತೀಯ ಕುಸ್ತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್, ಮಣಿಪುರ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
"ಮಣಿಪುರದಲ್ಲಿ ನಡೆದ ಘಟನೆ ಅತ್ಯಂತ ದುರದೃಷ್ಟಕರ. ಭಾರತದ ಒಂದು ಪ್ರಾಂತ್ಯದಲ್ಲಿ ನಡೆದಿರುವ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಗಮನಿಸಿದ್ದಾರೆ. ಸಂಭವಿಸಿರುವ ಘಟನೆ ಅತ್ಯಂತ ಹೇಯಕರ" ಎಂದು ಬ್ರಿಜ್ ಭೂಷಣ್ ಸಿಂಗ್ ಹೇಳಿದ್ದಾರೆ.
Next Story





