ʼನಬನ್ನ ಅಭಿಯಾನ ರ್ಯಾಲಿʼ: ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
ಕೋಲ್ಕತ್ತಾ ಪೊಲೀಸರಿಂದ ಲಾಠಿ ಚಾರ್ಜ್, ಅಶ್ರುವಾಯು ಪ್ರಯೋಗ

Photo: ANI
ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹಿಸಿ ಮತ್ತು ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವವರನ್ನು ಬಂಧಿಸುವಂತೆ ಒತ್ತಾಯಿಸಿ ಹೌರಾದ ಸಂತ್ರಗಚಿಯಲ್ಲಿ ʼನಬನ್ನ ಅಭಿಯಾನ ರ್ಯಾಲಿʼ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಪ್ರತಿಭಟನಾಕಾರರು ಬ್ಯಾರಿಕೇಡ್ ದಾಟಿ ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಅಶ್ರುವಾಯು ಶೆಲ್ಗಳನ್ನು ಸಿಡಿಸಿ ಅವರನ್ನು ಚದುರಿಸಿದರು ಎಂದು ತಿಳಿದು ಬಂದಿದೆ.
ಕೋಲ್ಕತ್ತಾ ಪೊಲೀಸ್ ವ್ಯಾಪ್ತಿಯಲ್ಲಿ ಕನಿಷ್ಠ 25 ಡಿಸಿಪಿ ಶ್ರೇಣಿಯ ಅಧಿಕಾರಿಗಳು ಭದ್ರತೆಯನ್ನು ನಿರ್ವಹಿಸುತ್ತಿದ್ದಾರೆ. ನಾಲ್ವರು ಐಜಿಗಳು, ಹಲವಾರು ಡಿಐಜಿಗಳು ಮತ್ತು ಎಸ್ಪಿ ಶ್ರೇಣಿಯ ಅಧಿಕಾರಿಗಳ ನೇತೃತ್ವದಲ್ಲಿ ಹೌರಾದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. 2000 ಮಂದಿ ಪೊಲೀಸರು ಪ್ರತಿಭಟನಾ ಸ್ಥಳದಲ್ಲಿದ್ದಾರೆ ಎಂದು ತಿಳಿದುಬಂದಿದೆ.
#WATCH | West Bengal: Protestors drag away Police barricades as they agitate over RG Kar Medical College and Hospital rape-murder case and carry out Nabanna Abhiyan' march. Police resort to opening lathi charge and lobbying tear gas shells to disperse them.
— ANI (@ANI) August 27, 2024
Visuals from… pic.twitter.com/rAAcnBGzLr
#WATCH | West Bengal: Police use water cannons to disperse protestors from Howrah Bridge.
— ANI (@ANI) August 27, 2024
A 'Nabanna Abhiyan' march has been called today over RG Kar Medical College and Hospital rape-murder case. pic.twitter.com/bQJ5a3hh1k