ಉಪ ರಾಷ್ಟ್ರಪತಿ ಚುನಾವಣೆ: ನಾಮಪತ್ರ ಸಲ್ಲಿಸಿದ NDA ಅಭ್ಯರ್ಥಿ ರಾಧಾಕೃಷ್ಣನ್

Image Credit: X/@BJP4India
ಹೊಸದಿಲ್ಲಿ: ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಅವರು ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತಿತರರ ಸಮ್ಮುಖದಲ್ಲಿ ಬುಧವಾರ ಉಪ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.
ಮೋದಿ ಹಾಗೂ ಇನ್ನಿತರ ಎನ್ಡಿಎ ನಾಯಕರೊಂದಿಗೆ ರಾಧಾಕೃಷ್ಣನ್ ಅವರು ಉಪ ರಾಷ್ಟ್ರಪತಿ ಚುನಾವಣೆಯ ಚುನಾವಣಾಧಿಕಾರಿಯೂ ಆಗಿರುವ ರಾಜ್ಯಸಭಾ ಪ್ರಧಾನ ಕಾರ್ಯದರ್ಶಿ ಪಿ.ಸಿ.ಮೋದಿಯವರಿಗೆ ತಮ್ಮ ನಾಮಪತ್ರದ ನಾಲ್ಕು ಪ್ರತಿಯನ್ನು ಹಸ್ತಾಂತರಿಸಿದರು.
ನಾಲ್ಕು ನಾಮಪತ್ರದ ಪ್ರತಿಗಳಲ್ಲಿ ಮೋದಿ, ರಾಜ್ ನಾಥ್ ಸಿಂಗ್, ಅಮಿತ್ ಶಾ ಹಾಗೂ ಜೆಡಿಯು ನಾಯಕ ರಾಜೀವ್ ರಂಜನ್ ಸಿಂಗ್ ಅವರು ಮುಖ್ಯ ಅನುಮೋದಕರಾಗಿದ್ದಾರೆ.
ಸೆಪ್ಟೆಂಬರ್ 9ರಂದು ಉಪ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದ ಅಭ್ಯರ್ಥಿಯಾಗಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಬಿ. ಸುದರ್ಶನ್ ರೆಡ್ಡಿ ಕಣಕ್ಕಿಳಿದಿದ್ದಾರೆ.
Next Story





