ಫೆ.20ರಂದು ರಾಮಲೀಲಾ ಮೈದಾನದಲ್ಲಿ ನೂತನ ದಿಲ್ಲಿ ಸಿಎಂ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ರಾಮಲೀಲಾ ಮೈದಾನ | PC : PTI
ಹೊಸದಿಲ್ಲಿ: ದಿಲ್ಲಿಯ ಮುಂದಿನ ಮುಖ್ಯಮಂತ್ರಿಗಳು ತನ್ನ ಸಚಿವ ಸಂಪುಟದೊಂದಿಗೆ ಫೆ.20ರಂದು ರಾಮಲೀಲಾ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ಸೋಮವಾರ ತಿಳಿಸಿವೆ.
ಫೆ.20ರಂದು ಸಂಜೆ 4:30ರ ಸುಮಾರಿಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುವ ಸಾಧ್ಯತೆಯಿದ್ದು, ಪಕ್ಷದ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ಹೇಳಿವೆ.
ಸೋಮವಾರ ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಬುಧವಾರಕ್ಕೆ ಮುಂದೂಡಲಾಗಿದ್ದು, ಪಕ್ಷವು ಅಂದೇ ಮುಖ್ಯಮಂತ್ರಿ ಹುದ್ದೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಿದೆ ಎಂದೂ ಮೂಲಗಳು ತಿಳಿಸಿವೆ. ಸಭೆಯಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವಿವರಗಳನ್ನೂ ಚರ್ಚಿಸಲಾಗುವುದು.
ಇತ್ತೀಚಿಗೆ ನಡೆದ ವಿಧಾನಸಭೆಯಲ್ಲಿ ಭರ್ಜರಿ ಗೆಲುವನ್ನು ಸಾಧಿಸುವ ಮೂಲಕ ಬಿಜೆಪಿ 26 ವರ್ಷಗಳ ಬಳಿಕ ದಿಲ್ಲಿಯಲ್ಲಿ ಅಧಿಕಾರಕ್ಕೆ ಮರಳಿದೆ.
Next Story





