ಮಹದೇವ ಬೆಟ್ಟಿಂಗ್ ಆ್ಯಪ್ ಪ್ರಕರಣ | ನಟ ಸಾಹಿಲ್ ಖಾನ್ ಬಂಧನ
Image posted on Instagram by @teamsahilkhan
ಮುಂಬೈ: ಮಹದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ನಟ ಸಾಹಿಲ್ ಖಾನ್ ಅವರನ್ನು ಛತ್ತೀಸ್ಗಢದಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಛತ್ತೀಸ್ಗಢದಲ್ಲಿ ಮುಂಬೈ ಸೈಬರ್ ಸೆಲ್ನ ವಿಶೇಷ ತನಿಖಾ ತಂಡ (ಎಸ್ಐಟಿ) ಅವರನ್ನು ಬಂಧಿಸಿದ್ದು, ಮುಂಬೈಗೆ ಕರೆತರಲಾಗುತ್ತಿದೆ ಎಂದು ತಿಳಿದು ಬಂದಿದೆ.
2023 ರಲ್ಲಿ, ಮಹಾದೇವ್ ಬೆಟ್ಟಿಂಗ್ ಆ್ಯಪ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ಅಪರಾಧ ವಿಭಾಗವು ಡಿಸೆಂಬರ್ 15 ರಂದು ತಮ್ಮ ಹೇಳಿಕೆಗಳನ್ನು ದಾಖಲಿಸಲು ಸಾಹಿಲ್ ಖಾನ್ ಮತ್ತು ಇತರ ಮೂವರಿಗೆ ಸಮನ್ಸ್ ನೀಡಿತ್ತು ಎಂದು ವರದಿಯಾಗಿದೆ. ಆದರೆ, ಖಾನ್ ತನಿಖೆಗಾಗಿ ಪೊಲೀಸರ ಮುಂದೆ ಹಾಜರಾಗಲಿಲ್ಲ
Next Story