ಬಿಹಾರ ಗೆಲುವು | ಮತದಾರರಿಗೆ ನಾನು ತಲೆ ಬಾಗಿ ನಮಿಸುತ್ತೇನೆ: ನಿತೀಶ್ ಕುಮಾರ್

ನಿತೀಶ್ ಕುಮಾರ್ | Photo Credit : PTI
ಪಾಟ್ನಾ,ನ.14: ತನ್ನ ಆಡಳಿತಾರೂಢ ಎನ್ಡಿಎ ಬಣವನ್ನು ಭರ್ಜರಿಯಾಗಿ ಗೆಲ್ಲಿಸಿದ್ದಕ್ಕೆ ಶುಕ್ರವಾರ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಬಿಹಾರವು ಇನ್ನಷ್ಟು ಪ್ರಗತಿಯನ್ನು ಸಾಧಿಸುವ ಮೂಲಕ ದೇಶದ ಅತ್ಯಂತ ಅಭಿವೃದ್ಧಿ ಹೊಂದಿದ ರಾಜ್ಯಗಳಲ್ಲಿ ಒಂದಾಗಲಿದೆ ಎಂದು ಘೋಷಿಸಿದ್ದಾರೆ.
ಬೃಹತ್ ಗೆಲುವಿಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿರುವ ಅವರು, ವಿಧಾನಸಭಾ ಚುನಾವಣೆಗಳಲ್ಲಿ ಎನ್ಡಿಎ ಸಂಪೂರ್ಣ ಒಗ್ಗಟ್ಟನ್ನು ಪ್ರದರ್ಶಿಸಿತ್ತು ಎಂದು ಹೇಳಿದ್ದಾರೆ.
‘ಬಿಹಾರ ವಿಧಾನಸಭಾ ಚುನಾವಣೆಗಳಲ್ಲಿ ಭರ್ಜರಿ ಬಹುಮತವನ್ನು ನೀಡುವ ಮೂಲಕ ರಾಜ್ಯದ ಜನರು ನಮ್ಮ ಸರಕಾರದಲ್ಲಿ ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇದಕ್ಕಾಗಿ ರಾಜ್ಯದ ಎಲ್ಲ ಗೌರವಾನ್ವಿತ ಮತದಾರರಿಗೆ ನಾನು ತಲೆ ಬಾಗಿ ನಮಿಸುತ್ತೇನೆ ಮತ್ತು ನನ್ನ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ’ಎಂದು ನಿತೀಶ್ ಎಕ್ಸ್ ಪೋಸ್ಟ್ ನಲ್ಲಿ ಹೇಳಿದ್ದಾರೆ.
ಎನ್ಡಿಎದ ಎಲ್ಲ ಪಾಲುದಾರ ಪಕ್ಷಗಳಿಗೂ ಅವರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.





