ಬಿʼಹಾರʼ | ನ.20ಕ್ಕೆ ನಿತೀಶ್ ಪ್ರಮಾಣ ?

ನಿತೀಶ್ ಕುಮಾರ್ | Photo Credit : PTI
ಪಾಟ್ನಾ,ನ.18: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಪಚಂಡ ಜಯಭೇರಿ ಬಾರಿಸಿರುವ ಬಿಜೆಪಿ-ಜೆಡಿಯು ನೇತೃತ್ವದ ಎನ್ಡಿಎ ಮೈತ್ರಿಕೂಟವು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಗುರುವಾರದಂದು ದಾಖಲೆಯ 10ನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆಯಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಎನ್ಡಿಎ ಆಳ್ವಿಕೆಯ ರಾಜ್ಯಗಳ ಹಲವು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜೆಡಿಯು ಶಾಸಕಾಂಗ ಪಕ್ಷದ ನಾಯಕನಾಗಿ ನಿತೀಶ್ ಕುಮಾರ್ ಅವರು ನವೆಂಬರ್ 19ರಂದು ಆಯ್ಕೆಯಾಗುವ ಸಾಧ್ಯತೆಯಿದ್ದು, ಮರುದಿನ ಪಾಟ್ನಾದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು ಜೆಡಿಯು ಮೂಲಗಳು ತಿಳಿಸಿವೆ.
ಸೋಮವಾರ ನಿತೀಶ್ ಕುಮಾರ್ ಅವರು ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರನ್ನು ಭೇಟಿಯಾಗಿ ಹಾಲಿ ವಿಧಾನಸಭೆಯನ್ನು ವಿಸರ್ಜಿಸುವಂತೆ ಮತ್ತು ನೂತನ ಸರಕಾರ ರಚನೆ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಕೋರಿದ್ದರು.





